ಕ್ರಿಕೆಟಿಗ ಶಾಹಿದ್ ಅಫ್ರಿದಿಗೆ ಬಂಧಿತ ಐಎಸ್ ಐ ಏಜೆಂಟ್ ಜೊತೆ ನಂಟು?
ಬಂಧಿತ ಫಾವದ್ ಪಾಕಿಸ್ತಾನ ಕ್ರಿಕೆಟಿಗ ಸಾಹಿದ್ ಅಫ್ರಿದಿ ಜೊತೆಗೆ ತೆಗೆಸಿಕೊಂಡಿರುವ ಫೋಟೋ ತೋರಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ...
ನವದೆಹಲಿ: ಐಎಸ್ ಐ ಬೇಹುಗಾರಿಕಾ ಆರೋಪದ ಮೇಲೆ ಬಂಧಿತನಾಗಿರುವ ಭಯೋತ್ಪಾದಕ ಮೊಹಮದ್ ಇಜಾಜ್ ಸಹೋದರ ಫಾವದ್ ಪಾಕಿಸ್ತಾನದ ಉನ್ನತ ವ್ಯಕ್ತಿಗಳೊಂದಿಗೆ ಸಂಪರ್ಕ ಹೊಂದಿದ್ದಾನೆ ಎನ್ನಲಾಗಿದೆ.
ಬಂಧಿತ ಫಾವದ್ ಪಾಕಿಸ್ತಾನ ಕ್ರಿಕೆಟಿಗ ಸಾಹಿದ್ ಅಫ್ರಿದಿ ಜೊತೆಗೆ ತೆಗೆಸಿಕೊಂಡಿರುವ ಫೋಟೋ ತೋರಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಪಾಕಿಸ್ತಾನದ ಐಎಸ್ ಐ ನಿಂದ ಕಳುಹಿಸಲ್ಪಟ್ಟಿರುವ ಭಯೋತ್ಪಾದಕ ಮೊಹಮದ್ ಇಜಾಜ್ ನನ್ನು ಕಳೆದ ವಾರ ಉತ್ತರ ಪ್ರದೇಶದಲ್ಲಿ ಬಂಧಿಸಲಾಯಿತು. ಈ ಎಲ್ಲಾ ಮಾಹಿತಿಗಳನ್ನು ಗಮನಿಸಿದಾಗ ಮೊಹಮದ್ ಇಜಾಜ್ ಐಎಸ್ ಐ ಏಜೆಂಟ್ ಎಂಬುದನ್ನು ಸಾಬೀತು ಪಡಿಸುತ್ತವೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನೂ ಫೋಟೋವನ್ನು ವಶಕ್ಕೆ ತೆಗೆದು ಕೊಂಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.