ಗುವಾಹಟಿಯಲ್ಲಿ 2 ಕಚ್ಚಾ ಬಾಂಬ್ ಸ್ಫೋಟ: ಮೂವರಿಗೆ ಗಾಯ
ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿ ಎರಡು ಕಚ್ಚಾ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಗುವಾಹಟಿ: ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿ ಎರಡು ಕಚ್ಚಾ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಇಂದು ಮಧ್ಯಾಹ್ನ ಗುವಾಹಟಿಯ ಫ್ಯಾನ್ಸಿ ಬಜಾರ್ನಲ್ಲಿ ಈ ಸ್ಫೋಟ ಸಂಭವಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಘಟನೆಯಲ್ಲಿ ಉಲ್ಫಾ ಉಗ್ರರ ಕೈವಾಡ ಇರುವ ಸಾಧ್ಯತೆ ಇದೆ ಎಂದು ಗುವಾಹತಿ ಪೊಲೀಸ್ ಆಯುಕ್ತ ಮುಕೇಶ್ ಅಗರವಾಲ್ ಅವರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.