ಬಿಜೆಪಿ ಮತ್ತೆ ಅಧಿಕಾರಿಕ್ಕೆ ಬರಬೇಕಾದ್ರೆ ಬಾಬ್ರಿ ಮಸೀದಿ ನಿರ್ಮಾಣ ಮಾಡಿ: ಅಜಂ ಖಾನ್
ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ಅಯೋಧ್ಯೆಯಲ್ಲಿ ಧ್ವಂಸಗೊಂಡಿರುವ ಬಾಬ್ರಿ ಮಸೀದಿ ನಿರ್ಮಾಣ ಮಾಡಬೇಕು ಎಂದು ಉತ್ತರ ಪ್ರದೇಶದ...
ಲಖನೌ: ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ಅಯೋಧ್ಯೆಯಲ್ಲಿ ಧ್ವಂಸಗೊಂಡಿರುವ ಬಾಬ್ರಿ ಮಸೀದಿ ನಿರ್ಮಾಣ ಮಾಡಬೇಕು ಎಂದು ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ನಾಯಕ ಸಚಿವ ಅಜಂ ಖಾನ್ ಹೇಳಿದ್ದಾರೆ.
ಬಾಬ್ರಿ ಮಸೀದಿ ಧ್ವಂಸವಾದ 23ನೇ ಕರಾಳ ವರ್ಷಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅಝಂ ಖಾನ್ ಈ ರೀತಿ ಹೇಳಿಕೆ ನೀಡಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್)ನವರು ಸಲಿಂಗಕಾಮಿಗಳು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಅಜಂ ಖಾನ್, ಇಂದು ಆರ್ಎಸ್ಎಸ್ ಅನ್ನು ಬ್ಯಾನ್ ಮಾಡಬೇಕು ಆಗ ಮಾತ್ರ ಬಿಜೆಪಿ ಮತ್ತೆ ಅಧಿಕಾರ ಹಿಡಿಯಬಹುದು ಎಂದಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.