ಲಷ್ಕರ್-ಎ- ತೊಯ್ಬಾ ಉಗ್ರ ಸಂಘಟನೆ(ಸಂಗ್ರಹ ಚಿತ್ರ) 
ದೇಶ

ಗಣ್ಯರ ಮೇಲೆ ದಾಳಿ ನಡೆಸಲು ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆ ಸಂಚು

ದೆಹಲಿಯಲ್ಲಿರುವ ಪ್ರಮುಖ ವ್ಯಕ್ತಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಇಬ್ಬರು ಲಷ್ಕರ್-ಎ- ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ.

ನವದೆಹಲಿ: ದೆಹಲಿಯಲ್ಲಿರುವ ಪ್ರಮುಖ ವ್ಯಕ್ತಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಇಬ್ಬರು ಲಷ್ಕರ್-ಎ- ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಿರುವ ದೆಹಲಿ ಭಯೋತ್ಪಾದನಾ ನಿಗ್ರಹ ಪೊಲೀಸರು ಬಂಧಿತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬಂಧಿತ ಉಗ್ರರು ದೆಹಲಿಯಲ್ಲಿರುವ ಹೈ ಪ್ರೊಫೈಲ್ ವ್ಯಕ್ತಿಗಳ ಮೇಲೆ ಆತ್ಮಹತ್ಯಾ ದಾಳಿ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಗುಪ್ತಚರ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದು ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಬಂಧಿತರನ್ನು ಅಬು ದುಜಾನ ಹಾಗೂ ಅಬು ಉಕಶಾ ಎಂದು ಗುರುತಿಸಲಾಗಿದ್ದು, ಇಬ್ಬರೂ ಉಗ್ರರು ಪಾಕ್ ಆಕ್ರಮಿತ ಕಾಶ್ಮೀರದ ಮೂಲಕ ಕಾಶ್ಮೀರಕ್ಕೆ ನುಸುಳಿದ್ದಾರೆ ಎಂದು ತಿಳಿದುವಂದಿದೆ.
ಡಿ.1 ರಂದು ಇಬ್ಬರು ಉಗ್ರರ ವಿರುದ್ಧ ಐಪಿಸಿ ಸೆಕ್ಷನ್ 120 ಬಿ(ಅಪರಾಧ ಸಂಚು) ಎಫ್ಐಆರ್ ದಾಖಲಿಸಲಾಗಿದ್ದು ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆ ದೆಹಲಿಯಲ್ಲಿ ದಾಳಿ ನಡೆಸಲು ಸಂಚು ರೂಪಿಸುತ್ತಿದೆ ಎಂದು ಆರೋಪಿಸಲಾಗಿದೆ. ಕನಿಷ್ಠ 15 ಜನ ಲಷ್ಕರ್-ಎ-ತೊಯ್ಬಾ ಉಗ್ರರು, 22 ಹಿಜ್ಬುಲ್ ಮುಜಾಹಿದ್ದೀನ್ ಉಗ್ರರನ್ನು ಗುರುತಿಸಲಾಗಿದೆ ಎಂದು ಭಯೋತ್ಪಾದನಾ ನಿಗ್ರಹ ದಳ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!