ಪ್ರವೀಣ್ ತೊಗಾಡಿಯಾ 
ದೇಶ

ಹಿಂದೂಗಳ ಕನಸಾಗಿರುವ ರಾಮಮಂದಿರವನ್ನು ಪ್ರಧಾನಿ ಮೋದಿ ನನಸು ಮಾಡಲಿದ್ದಾರೆ: ಪ್ರವೀಣ್ ತೊಗಾಡಿಯಾ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದೇಶದ ಜನತೆಗೆ ನೀಡಿದ್ದ ಭರವಸೆಯಂತೆಯೇ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುತ್ತಾರೆ

ಭೋಪಾಲ್: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದೇಶದ ಜನತೆಗೆ ನೀಡಿದ್ದ ಭರವಸೆಯಂತೆಯೇ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುತ್ತಾರೆ ಎಂದು ವಿಶ್ವ ಹಿಂದೂ ಪರಿಷತ್ ನಾಯಕ ಪ್ರವೀಣ್ ತೊಗಾಡಿಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
1992 ರಲ್ಲಿ ಡಿ.6 ರಂದು ಬಾಬ್ರಿ ಮಸೀದಿ ಧ್ವಂಸಗೊಂಡ ಸ್ಥಳದಲ್ಲೇ ಅದ್ಭುತವಾದ ರಾಮ ಮಂದಿರ ನಿರ್ಮಾಣವಾಗಲಿದೆ.  ಲೋಕಸಭಾ ಚುನಾವಣೆಗೂ ಮುನ್ನ ನಡೆದಿದ್ದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸೋಮನಾಥ ದೇವಾಲಯದ ಮಾದರಿಯಲ್ಲೇ ರಾಮಮಂದಿರವನ್ನೂ ನಿರ್ಮಿಸುವುದಾಗಿ ಬಿಜೆಪಿ ದೇಶದ ಜನತೆಗೆ ಭರವಸೆ ನೀಡಿತ್ತು, ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆಯನ್ನು ಈಡೇರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ತೊಗಾಡಿಯಾ ಹೇಳಿದ್ದಾರೆ.
ಪ್ರಧಾನಿ ಮೋದಿ ಹಿಂದುಗಳ ಕನಸನ್ನು ನನಸಾಗಿಸುತ್ತಾರೆ ಎಂಬ ನಂಬಿಕೆ ಇದೆ, ಸರ್ದಾರ್ ಪಟೇಲ್ ಅವರು ಸೋಮನಾಥ ದೇವಾಲಯವನ್ನು ನಿರ್ಮಿಸಿದ ಮಾದರಿಯಲ್ಲೇ ಸಂಸತ್ತಿನಲ್ಲಿ ಶಾಸನ ಮಾಡುವ ಮೂಲಕ ರಾಮಮಂದಿರವೂ ನಿರ್ಮಾಣವಾಗಲಿದೆ ಎಂದು ತೊಗಾಡಿಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!