ಸಂವಿಧಾನ ಶಿಲ್ಪಿ ಅಂಬೇಡ್ಕರ್'ಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ, ರಾಷ್ಟ್ರಪತಿ 
ದೇಶ

ಸಂವಿಧಾನ ಶಿಲ್ಪಿ ಅಂಬೇಡ್ಕರ್'ಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ, ರಾಷ್ಟ್ರಪತಿ

ಭಾರತದ ಸಂವಿಧಾನ ಶಿಲ್ಪಿ ಹಾಗೂ ಶೋಷಿತ ಸಮುದಾಯಗಳ ಮಹಾನಾಯಕ ಎಂದೇ ಖ್ಯಾತಿಗಳಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ 60ನೇ ಪುಣ್ಯ ತಿಥಿ ಪ್ರಯುಕ್ತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಮಂತ್ರಿ...

ನವದೆಹಲಿ: ಭಾರತದ ಸಂವಿಧಾನ ಶಿಲ್ಪಿ ಹಾಗೂ ಶೋಷಿತ ಸಮುದಾಯಗಳ ಮಹಾನಾಯಕ ಎಂದೇ ಖ್ಯಾತಿಗಳಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ 60ನೇ ಪುಣ್ಯ ತಿಥಿ ಪ್ರಯುಕ್ತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಬಾಬಾಸಾಹೇಬ್ ಭೀಮ್ ರಾವ್ ಅಂಬೇಡ್ಕರ್ ಅವರ 60ನೇ ಪುಣ್ಯತಿಥಿ ದಿನವಾದ ಇಂದು ಸಂಸತ್ತಿನ ಆವರಣದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಗೌರವಾರ್ಪಣೆ ಮಾಡುವ ಮೂಲಕ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಮಂತ್ರಿ ನರೇಂದ್ರ ಮೋದಿ, ಎಲ್.ಕೆ.ಅಡ್ವಾಣಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸ್ಪೀಕರ್ ಸುಮಿತ್ರಾ ಮಹಾಜನ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇನ್ನಿತರೆ ಮುಖಂಡರು ಶ್ರದ್ಧಾಂಜಲಿ ಅರ್ಪಿಸಿದರು.

ಅಂಬೇಡ್ಕರ್ ಪುಣ್ಯತಿಥಿ ಸ್ಮರಣಾರ್ಥದ ಅಂಗವಾಗಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಅರ್ಪಿಸಿ ರು.125 ಹಾಗೂ ರು.10ರ ಎರಡೂ ನಾಣ್ಯಗಳನ್ನು ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ಅವರು, ಅಂಬೇಡ್ಕರ್ ಅವರು ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ಸಂಪೂರ್ಣವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದ್ದರೂ ಸಹ ಅವರ ಆರ್ಥಿಕ ಚಿಂತನೆ ಹಾಗೂ ಅವರ ದೃಷ್ಟಿಗಳು ಈಗಲೂ ಸಂಪೂರ್ಣವಾಗಿ ಅರ್ಥವಾಗಿಲ್ಲ. ಸಮಾಜಕ್ಕಾಗಿ ಅವರು ಪಟ್ಟ ಶ್ರಮವನ್ನು ಶ್ಲಾಘಿಸಲೇಬೇಕಿದೆ ಎಂದು ಹೇಳಿದ್ದಾರೆ.

ಒಬ್ಬ ವ್ಯಕ್ತಿ ಸಮಾಜವನ್ನು ಬಿಟ್ಟು ಅಗಲಿದರೂ ಸಹ ಆ ವ್ಯಕ್ತಿಯನ್ನು ಇಂದಿಗೂ ನಮ್ಮೊಡನೆ ಇದ್ದಾನೆಂಬ ಭಾವನೆ ಮೂಡುವುದು ಕೇವಲ ವ್ಯಕ್ತಿಗಳಲ್ಲಿ ಮಾತ್ರ. ಅಂಬೇಡ್ಕರ್ ಅವರು ನಮ್ಮನ್ನಗಲಿ 60 ವರ್ಷಗಳು ಕಳೆದಿದೆ. ಅಂಬೇಡ್ಕರ್ ಅವರ ಆಲೋಚನೆಗಳನ್ನು ಹೆಚ್ಚು ನೆನಪಿಸಿಕೊಳ್ಳಬೇಕಿದೆ. ಅಂಬೇಡ್ಕರ್ ಅವರ ದೃಷ್ಟಿ ಹಾಗೂ ಅವರ ಆಲೋಚನಾ ವಿಧಾನವನ್ನು ಗೌರವಿಸಿ ಅನುಸರಿಸಬೇಕಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT