ಚೆನ್ನೈ ವಿಮಾನ ನಿಲ್ದಾಣದಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾರಂಭ (ಸಾಂಕೇತಿಕ ಚಿತ್ರ) 
ದೇಶ

ಚೆನ್ನೈ ವಿಮಾನ ನಿಲ್ದಾಣದಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾರಂಭ

ಐದು ದಿನಗಳ ಬಳಿಕ ಚೆನ್ನೈ ನಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆ ಪ್ರಾರಂಭವಾಗಿದೆ.

ಚೆನ್ನೈ: ಐದು ದಿನಗಳ ಬಳಿಕ ಚೆನ್ನೈ ನಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆ ಪ್ರಾರಂಭವಾಗಿದೆ.
ಚೆನ್ನೈ ನಲ್ಲಿ ಜಲಪ್ರವಾಹ ಉಂಟಾಗಿ, ವಿಮಾನ ನಿಲ್ದಾಣ ಜಲಾವೃತಗೊಂಡಿದ್ದರಿಂದ ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಬೆಳಿಗ್ಗೆ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅಂತಾರಾಷ್ಟ್ರೀಯ ವಿಮಾನಗಳು ಕಾರ್ಯಾರಂಭ ಮಾಡಿವೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಅಧಿಕೃತ ಪತ್ರಿಕಾಪ್ರಕಟಣೆ ಬಿಡುಗಡೆ ಮಾಡಿದ್ದಾರೆ.
ರಾತ್ರಿ ವೇಳೆ ಸಂಚರಿಸುವ ವಿಮಾನಗಳೂ ಸಹ ಕಾರ್ಯಾರಂಭ ಮಾಡಲಿವೆ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ. ಜಲಾವೃತಗೊಂಡಿದ್ದ ವಿಮಾನ ನಿಲ್ದಾಣದ ರನ್ ವೇ ಯನ್ನು ನ.7 ರಂದು ತಪಾಸಣೆ ಮಾಡಿದ್ದ ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯದ ಅಧಿಕಾರಿಗಳು  ಚೆನ್ನೈ ವಿಮಾನ ನಿಲ್ದಾಣ ಸ್ಥಳೀಯ ಹಾಗೂ ಅಂತಾರಾಷ್ಟ್ರೀಯ ವಿಮಾನಗಳ ಪೂರ್ಣಪ್ರಮಾಣದ ಕಾರ್ಯಾಚರಣೆಗೆ ಸಿದ್ಧವಾಗಿದೆ ಎಂದು ಘೋಷಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel