ರಾಹುಲ್ ಗಾಧಿ - ಸೋನಿಯಾ ಗಾಂಧಿ 
ದೇಶ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸುಪ್ರೀಂ ಕೋರ್ಟ್ ಮೆಟ್ಟಿಲೇರಲು 'ಕೈ' ನಿರ್ಧಾರ

ನ್ಯಾಷನಲ್ ಹೆರಾಲ್ಡ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧ ತಮಗೆ ನೀಡಿದ್ದ ಸಮನ್ಸ್ ರದ್ದುಪಡಿಸಲು ನಿರಾಕರಿಸಿರುವ ಹೈಕೋರ್ಟ್...

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅವ್ಯವಹಾರ ಪ್ರಕರಣ ಸಂಬಂಧ ತಮಗೆ ನೀಡಿದ್ದ ಸಮನ್ಸ್ ರದ್ದುಪಡಿಸಲು ನಿರಾಕರಿಸಿರುವ ಹೈಕೋರ್ಟ್ ಆದೇಶವನ್ನು ಸಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ನಿರ್ಧರಿಸಿದ್ದಾರೆ.

ಹೈಕೋರ್ಟ್ ಆದೇಶದಿಂದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಯಾವುದೇ ಹಿನ್ನೆಡೆಯಾಗಿಲ್ಲ ಎಂದಿರುವ ಕಾಂಗ್ರೆಸ್, ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ಹೇಳಿದೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಸಂಪೂರ್ಣ ರಾಜಕೀಯ ದುರುದ್ದೇಶದಿಂದ ಕೂಡಿದ ಖಾಸಗಿ ದೂರು ಎಂದು ಆರೋಪಿಸಿದೆ. ಅಲ್ಲದೆ ಇದೊಂದು ರಾಜಕೀಯ ಸೇಡು ಮತ್ತು ಪಕ್ಷದ ನಾಯಕರ ಗೌರವಕ್ಕೆ ಧಕ್ಕೆ ತರುವ ಉದ್ದೇಶದಿಂದ ದೂರು ದಾಖಲಿಸಲಾಗಿದೆ ಎಂದು ಹೇಳಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಪಟಿಯಾಲ ನ್ಯಾಯಾಲಯ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ಸೋನಿಯಾ, ರಾಹುಲ್ ದೆಹಲಿ ಹೈ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈ ಕೋರ್ಟ್ ಇಂದು ಅರ್ಜಿಯನ್ನು ವಜಾಗೊಳಿಸಿದೆ.

ಸದ್ಯ ಪ್ರಕಟಣೆ ನಿಲ್ಲಿಸಿರುವ ನ್ಯಾಷನಲ್‌ ಹೆರಾಲ್ಡ್‌ ಕಂಪನಿಗೆ ದೇಶದ ವಿವಿಧೆಡೆ 2000 ಕೋಟಿ ರೂ. ಬೆಲೆಬಾಳುವ ಭೂಮಿ ಇದೆ. ಇದನ್ನು ಕಬಳಿಸಲು ಸೋನಿಯಾ, ರಾಹುಲ್‌ ಅವ್ಯವಹಾರ ನಡೆಸಿದ್ದಾರೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ದೂರು ನೀಡಿದ್ದರು. ಈ ಪ್ರಕರಣ ಸಂಬಂಧ ಸೋನಿಯಾ ಹಾಗೂ ರಾಹುಲ್‌ಗೆ 2014ರಲ್ಲಿ ದೆಹಲಿ ವಿಚಾರಣಾಧೀನ ಕೋರ್ಟ್‌ ಸಮನ್ಸ್‌ ಕೂಡ ಜಾರಿ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!