ವಿ.ಕೆ ಸಿಂಗ್ ವಿರುದ್ಧ ರಾಹುಲ್ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ, ಕೇಂದ್ರ ಸಚಿವ ಜನರಲ್ ವಿ.ಕೆ ಸಿಂಗ್ ಅವರ 'ನಾಯಿ' ಹೇಳಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು...
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ, ಕೇಂದ್ರ ಸಚಿವ ಜನರಲ್ ವಿ.ಕೆ ಸಿಂಗ್ ಅವರ 'ನಾಯಿ' ಹೇಳಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.
ಸಂಸತ್ತಿನ ಮಹಾತ್ಮ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸಿ ಸಚಿವ ವಿ.ಕೆ ಸಿಂಗ್ ಅವರು ರಾಜೀನಾಮೆ ನೀಡುವಂತೆ ಆಗ್ರಹಿಸಿದರು.'ದಲಿತರ ವಿರುದ್ಧ ಮಾತನಾಡುವವರಿಗೆ ಸಚಿವರಾಗಿರುವ ಹಕ್ಕಿಲ್ಲ. ಅವರನ್ನು ಪ್ರಧಾನಿ ವಜಾಗೊಳಿಸಬೇಕು, ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಒತ್ತಾಯಿಸಿದ್ದಾರೆ.
ಹರ್ಯಾಣದ ಫರೀದಾಬಾದ್‌ನಲ್ಲಿ ಇಬ್ಬರು ದಲಿತ ಮಕ್ಕಳ ದಹನ ಪ್ರಕರಣದ ವಿಚಾರವಾಗಿ ಸಂಸತ್ತಿನಲ್ಲಿ ಚರ್ಚೆ ನಡೆಯುತ್ತಿದ್ದ ವೇಳೆ, 'ನಾಯಿಗೆ ಕಲ್ಲು ಹೊಡೆದು ಸರ್ಕಾರವನ್ನು ದೂಷಿಸುತ್ತಾರೆ' ಎಂದು ಹೇಳಿದ್ದ ವಿ.ಕೆ ಸಿಂಗ್ ಭಾರಿ ವಿವಾದಕ್ಕೀಡಾಗಿದ್ದರು.
ವಿ.ಕೆ. ಸಿಂಗ್ ಕಲಾಪಕ್ಕೆ ಆಗಮಿಸಿದರೆ, ನಾವು ಅದನ್ನು ವಿರೋಧಿಸುತ್ತೇವೆ. ಸಿಂಗ್ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳಬೇಕು,' ಎಂದು ಆಗ್ರಹಿಸಿರುವ ಕಾಂಗ್ರೆಸ್ ಸಿಂಗ್ ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.