ಸಚಿನ್ ತೆಂಡೂಲ್ಕರ್ 
ದೇಶ

ಮೂರು ವರ್ಷಗಳ ನಂತರ ಮೊದಲ ಬಾರಿಗೆ ಸಂಸತ್ತಿನಲ್ಲಿ ದನಿಯೆತ್ತಿದ ಸಚಿನ್ !

ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಮೂರು ವರ್ಷಗಳ ನಂತರ ಮೊದಲ ಬಾರಿಗೆ ತಮ್ಮ ಮೌನ ಮುರಿದು ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ್ದಾರೆ....

ನವದೆಹಲಿ; ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಮೂರು ವರ್ಷಗಳ ನಂತರ ಮೊದಲ ಬಾರಿಗೆ ತಮ್ಮ ಮೌನ ಮುರಿದು ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ್ದಾರೆ.

ಜೂನ್ 3, 2012 ರಲ್ಲಿ  ರಾಜ್ಯ ಸಭಾ ಸದಸ್ಯರಾಗಿ ನೇಮಕಗೊಂಡ ನಂತರ ಸಚಿನ್ ತೆಂಡೂಲ್ಕರ್ ಸದನಕ್ಕೆ ಹಾಜರಾಗಿದ್ದು ತೀರಾ ಕಡಿಮೆ. ಸದನದಲ್ಲಿ ಅವರ ಕಳಪೆ ಹಾಜರಾತಿಗಾಗಿ ಅನೇಕ ಟೀಕೆಗಳನ್ನು ಎದುರಿಸಿದ್ದಾರೆ.

ರಾಜ್ಯಸಭೆಯಲ್ಲಿ ಕೊಲ್ಕೋತಾದಲ್ಲಿ ಮೆಟ್ರೋ ರೈಲು ಸಂಚಾರ ಸಂಬಂಧ ರೈಲ್ವೆ ಇಲಾಖೆ ಸಚಿವರಿಗೆ ಲಿಖಿತ ಪ್ರಶ್ನೆ ಕೇಳಿದ ಸಚಿನ್, ಮುಂಬೈ, ಚೆನ್ನೈ, ದೆಹಲಿಗಳಲ್ಲಿ ಇರುವಂತೆ ಕೊಲ್ಕೋತಾದಲ್ಲೂ ಮೆಟ್ರೋ ರೈಲು ತರುವ ಬಗ್ಗೆ ಉತ್ತರಿಸುವಂತೆ ಕೇಳಿದ್ದಾರೆ.

ಇನ್ನೂ ಚಾಲನಾ ಪರವಾನಗಿ ನೀಡುವಾಗ ಕೆಲವೊಂದು ಬದಲಾವಣೆ ತರುವ ಬಗ್ಗೆಯೂ ಸಹ ಸಚಿನ್ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಪಂದ್ಯ ಮುಗಿಸಿ ಮನೆಗೆ ಮರಳುವಾಗ ಭೀಕರ ಅಪಘಾತ, 4 ಕ್ರಿಕೆಟಿಗರ ದಾರುಣ ಸಾವು!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್