ನ.8 ರಂದು ಇಸ್ಲಾಮಾಬಾದ್ ಗೆ ಭೇಟಿ ನೀಡಲಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮಂಗಳವಾರ ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ರಾಜೀವ್ ಪ್ರತಾಪ್ ರೂಡಿ ತಿಳಿಸಿದ್ದಾರೆ.
ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮಂಗಳವಾರ ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ರಾಜೀವ್ ಪ್ರತಾಪ್ ರೂಡಿ ತಿಳಿಸಿದ್ದಾರೆ.
ನ.8 ರಂದು ಸುಷ್ಮಾ ಸ್ವರಾಜ್ ಅವರು ಇಸ್ಲಾಮಾಬಾದ್ ಗೆ ಪ್ರಯಾಣಿಸಲಿದ್ದು ವಾಪಸ್ಸಾದ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಲಿದ್ದಾರೆ. ಸುಷ್ಮಾ ಸ್ವರಾಜ್ ಭಾರತಕ್ಕೆ ವಾಪಸ್ಸಾದ ಬಳಿಕ ಪಾಕಿಸ್ತಾನ- ಭಾರತದ ದ್ವಿಪಕ್ಷೀಯ ಮಾತುಕತೆ ಬಗ್ಗೆ ಸಂಸತ್ ಗೆ ವಿಸ್ತೃತ ಮಾಹಿತಿ ನೀಡಲಿದ್ದಾರೆ ಎಂದು ರೂಡಿ ಹೇಳಿದ್ದಾರೆ.
ನ.7 ರಂದು ನವದೆಹಲಿಯಲ್ಲಿ ಪಾಕಿಸ್ತಾನ- ಭಾರತ ರಾಷ್ಟ್ರೀಯ ಭದ್ರತಾ ಸಲಹೆಗಾರ(ಎನ್.ಎಸ್.ಎ) ಮಟ್ಟದ ಮಾತುಕತೆ ನಡೆದಿತ್ತು. ಸಭೆಯಲ್ಲಿ ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧವನ್ನು ಮುಂದುವರೆಸಲು ತೀರ್ಮಾನಿಸಲಾಗಿತ್ತು. ಇಸ್ಲಾಮಾಬಾದ್ ಗೆ ತೆರಳಲಿರುವ ಸುಷ್ಮಾ ಸ್ವರಾಜ್ "ಹಾರ್ಟ್ ಏಷ್ಯಾದ" ಭದ್ರತಾ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.