ಶ್ರೀನಗರ-ಜಮ್ಮು ಹೆದ್ದಾರಿಯಲ್ಲಿ ಇಬ್ಬರು ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇನಾಪಡೆ ಮಂಗಳವಾರ ಇಬ್ಬರು...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇನಾಪಡೆ ಮಂಗಳವಾರ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ.
ಪ್ಯಾಂಪೊರೆಯಿಂದ 12 ಕಿ.ಮೀ ದೂರದಲ್ಲಿ ಪಿಕ್ಅಪ್ ವಾಹನದಲ್ಲಿ ತೆರಳುತ್ತಿದ್ದ ಉಗ್ರರು, ವಾಹನ ನಿಲ್ಲಿಸಲು ಸೂಚಿಸಿದ ಭದ್ರತಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿ ದಾಳಿ ನಡೆಸಿದ ಸೇನಾಪಡೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅನಂತನಾಗ್ ಜಿಲ್ಲೆಯಿಂದ ಶ್ರೀನಗರಕ್ಕೆ ಕೆಲವು ಉಗ್ರರು ಪ್ರಯಾಣ ಮಾಡುತ್ತಿದ್ದಾರೆ ಎಂಬಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸೇನಾಪಡೆ ಪ್ಯಾಂಪೊರೆ ಪ್ರದೇಶದ ಸೆಂಪೊರಾದಲ್ಲಿ ತಾತ್ಕಾಲಿಕ ಚೆಕ್ಪೋಸ್ಟ್ ತೆರೆದಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.