ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ದೆಹಲಿ ಸಮೀಪ ಸತತ ಎರಡು ಗಂಟೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ, ಬೇಸತ್ತ ಗಡ್ಕರಿ 24 ಗಂಟೆಗಳಲ್ಲಿ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡು ಹಿಡಿಯುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ದೆಹಲಿ ಟ್ರಾಫಿಕ್ ಸಮಸ್ಯೆ ಬಗ್ಗೆ ಅಧ್ಯಯನ ನಡೆಸುತ್ತಿದ್ದೂ ಶೀಘ್ರವೇ ಅದರ ತಮ್ಮ ಕೈ ತಲುಪಲಿದೆ.ಸಮಸ್ಯೆ ಎಲ್ಲಿದೆ ಎಂಬುದರ ಬಗ್ಗೆ ಗಮನಿಸಿ ದೆಹಲಿ ಸರ್ಕಾರಕ್ಕೆ ಮಾಹಿತಿ ನೀಡಲಾಗುತ್ತದೆ. ಟ್ರಾಫಿಕ್ ಸಮಸ್ಯೆ ಬಗೆಹರಿಸೋ ಸಂಬಂಧ ದೆಹಲಿ ಸರ್ಕಾರದ ಜೊತೆ ಕೇಂದ್ರ ಸರ್ಕಾರ ಕೈ ಜೋಡಿಸುತ್ತದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.
ಸೋಮವಾರ ರಾತ್ರಿ ಏರ್ ಪೋರ್ಟ್ ರಸ್ತೆಯಲ್ಲಿ ಬರುವಾಗ ನಿತಿನ್ ಗಡ್ಕರಿ ಗುರಗಾವ್ ಮತ್ತು ಮಹಿಪಾಲ್ಪುರ್ ಮೇಲ್ಸೇತುವೆ ಮೇಲೆ ಸುಮಾರು 2 ಗಂಟೆಗಳ ಕಾಲ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ್ದರು.
ಮುಂದಿನ ಒಂದು ವರ್ಷದಲ್ಲಿ ಸುಮಾರು ಅರ್ಧದಷ್ಟು ಟ್ರಾಫಿಕ್ ಜಾಮ್ ಕಡಿಮೆಯಾಗಲಿದೆ ಎಂದು ನಿತಿನ್ ಗಡ್ಕರಿ ಭರವಸೆ ವ್ಯಕ್ತಪಡಿಸಿದ್ದಾರೆ.