ಅಪಘಾತ ಮಾಡಿ ಪೊಲೀಸರೊಂದಿಗೆ ದುರ್ವತನೆ ತೋರಿದ ರಷ್ಯಾ ರಾಯಭಾರಿ 
ದೇಶ

ಅಪಘಾತ ಮಾಡಿ ಪೊಲೀಸರೊಂದಿಗೆ ದುರ್ವತನೆ ತೋರಿದ ರಷ್ಯಾ ರಾಯಭಾರಿ

ರಷ್ಯಾ ರಾಯಭಾರಿಯೊಬ್ಬರು ಅಪಘಾತ ಮಾಡಿ ನಂತರ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿರುವ ಘಟನೆಯೊಂದು ದಕ್ಷಿಣ ದೆಹಲಿಯ ಮೋತಿಭಾಗ್ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ...

ರಷ್ಯಾ: ರಷ್ಯಾ ರಾಯಭಾರಿಯೊಬ್ಬರು ಅಪಘಾತ ಮಾಡಿ ನಂತರ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿರುವ ಘಟನೆಯೊಂದು ದಕ್ಷಿಣ ದೆಹಲಿಯ ಮೋತಿಭಾಗ್ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ರಷ್ಯಾ ರಾಯಭಾರಿಯಿದ್ದ ಕಾರು ನಿನ್ನೆ ರಾತ್ರಿ ವೇಗವಾಗಿ ಬಂದು  ಬೈಕ್ ಸವಾರನೊಬ್ಬನಿಗೆ ಡಿಕ್ಕಿ ಹೊಡೆದಿದೆ. ನಂತರ ಪೊಲೀಸರ ಬ್ಯಾರಿಕೇಡ್ ಗೂ ಗುದ್ದಿದೆ. ಸ್ಥಳದಲ್ಲಿ ಪೊಲೀಸರು ರಾಯಭಾರಿಯನ್ನು ಕಾರಿನಿಂದ ಕೆಳಗಿಳಿಯುವಂತೆ ಸೂಚಿಸಿ ಮಾತನಾಡಲು ಮುಂದಾದಾಗ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ನಂತರ ಪೊಲೀಸರೊಂದಿಗೆ ಅನುಚಿತ ವರ್ತನೆ ತೋರಿದ್ದು, ಬೆದರಿಕೆ ಹಾಕಿದ್ದಾರೆಂದು ಪೊಲೀಸರು ಹೇಳಿದ್ದಾರೆ.

ರಷ್ಯಾ ರಾಯಭಾರಿಯಾಗಿರುವುದರಿಂದ ಅವರಿಗೆ ಈ ಬಗ್ಗೆ ವಿನಾಯಿದ್ದು, ಈ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಿ ಸಲಹೆ ಪಡೆದ ನಂತರ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!