ನರೇಂದ್ರ ಮೋದಿ 
ದೇಶ

ಪ್ರಜಾಪ್ರಭುತ್ವದ ವ್ಯಾಖ್ಯಾನ ಸರ್ಕಾರ, ಚುನಾವಣೆಗೆ ಸೀಮಿತವಾಗಬಾರದು: ಮೋದಿ

ಪ್ರಜಾಪ್ರಭುತ್ವದ ವ್ಯಾಖ್ಯಾನ ಕೇವಲ ಚುನಾವಣೆ ಹಾಗೂ ಸರ್ಕಾರಕ್ಕೆ ಮಾತ್ರ ಸೀಮಿತವಾಗಬಾರದು

ನವದೆಹಲಿ: ಪ್ರಜಾಪ್ರಭುತ್ವದ ವ್ಯಾಖ್ಯಾನ ಕೇವಲ ಚುನಾವಣೆ ಹಾಗೂ ಸರ್ಕಾರಕ್ಕೆ ಮಾತ್ರ ಸೀಮಿತವಾಗಬಾರದು, ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇವೆ ಎಂಬ ಭಾವನೆ ಎಲ್ಲರಲ್ಲೂ ಮೂಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಜಾಗರಣ್ ನ್ಯೂಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ,  ಜನರ ಭಾಗಿತ್ವದಿಂದಲೇ ಪ್ರಜಾಪ್ರಭುತ್ವ ಬಲಿಷ್ಠಗೊಳ್ಳಲು ಸಾಧ್ಯ, ಭಾರತದ ಅಭಿವೃದ್ಧಿಯನ್ನು ಜನಾಂದೋಲನವನ್ನಾಗಿ ಮಾಡುವ ಮೂಲಕ ದೇಶಕ್ಕಾಗಿ ದುಡಿಯುತ್ತಿದ್ದೇನೆ ಎಂಬ ಭಾವನೆ ದೇಶದ ಪ್ರತಿಯೊಬ್ಬರಲ್ಲೂ ಮೂಡುವಂತೆ ಮಾಡುವುದು ತಮ್ಮ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಜನರು ಜಿಎಸ್ ಟಿ ಹಾಗೂ ಸಂಸತ್ ಬಗ್ಗೆ ಮಾತನಾಡುತ್ತಾರೆ. ಜಿಎಸ್ ಟಿ ಮಸೂದೆಗಿಂತಲೂ ಪ್ರಮುಖವಾಗಿ ಬಡಜನತೆಗಾಗಿ ರೂಪುಗೊಂಡ ಯೋಜನೆಗಳ ಮಸೂದೆಗಳು ಸಂಸತ್ ನಲ್ಲಿ ಬಾಕಿ ಇವೆ.  ಮಹಾತ್ಮಾ ಗಾಂಧಿ ಸ್ವಾತಂತ್ರ್ಯ ಚಳುವಳಿಯಲ್ಲಿ ಮಹತ್ತರ ಬದಲಾವಣೆ ಮಾಡಿ ಅದನ್ನು ಜನಾಂದೋಲನವನ್ನಾಗಿಸಿದ್ದರು. ಅದ್ದರಿಂದ ಮೊದಲು ಜನತೆ ಹಾಗೂ ಜನತೆಯ ಸಾಮರ್ಥ್ಯದ ಬಗ್ಗೆ ವಿಶ್ವಾಸ ಹೊಂದಿರಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!