ನವದೆಹಲಿ: ವಿರೋಧ ಪಕ್ಷಗಳಿಗೆ ಕಿರುಕುಳ ನೀಡುವುದು ಸರ್ಕಾರ ಆದೇಶಾಜ್ಞೆಯಾಗ ಬಾರದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಕೇಸ್ ಗೆ ಸಂಬಂಧಿಸಿದಂತೆ ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ ಮುಂದುವರಿದಿದ್ದು, ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಪ್ರತಿಪಕ್ಷಗಳು ಆರೋಪ ಮಾಡಿದ್ದು ಈ ಬೆನ್ನಲ್ಲೇ ನಿತೀಶ್ ಕುಮಾರ್ ಈ ಹೇಳಿಕೆ ನೀಡಿದ್ದಾರೆ.
ಸುಗಮ ಕಲಾಪ ನಡೆಸುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿರುವ ನಿತೀಶ್ ಕುಮಾರ್, ಇದರಲ್ಲಿ ಪ್ರಧಾನಿ ಮಂತ್ರಿಗಳ ಕಾರ್ಯಾಲಯದ ಕೈವಾಡವಿದೆ ಎಂದಿದ್ದಾರೆ. ಇನ್ನು ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ ಮುಂದುವರಿದ್ದಿದ್ದರಿಂದ ಪದೇ ಪದೇ ಕಲಾಪವನ್ನು ಮುಂದೂಡಲಾಯಿತು.