ನವದೆಹಲಿ: 2001ರಲ್ಲಿ ಸಂಸತ್ತು ಭವನದ ಮೇಲೆ ನಡೆದ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಇತರ ಸದಸ್ಯರು ಗೌರವ ನಮನ ಸಲ್ಲಿಸಿದರು.
ಪ್ರಧಾನಿಗಳ ಜೊತೆ ಲೋಕಸಭಾಧ್ಯಕ್ಷೆ ಸುಮಿತ್ರಾ ಮಹಾಜನ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ, ಅಲ್ಪಸಂಖ್ಯಾತ ಖಾತೆ ಸಚಿವ ನಜ್ಮಾ ಹೆಫ್ತುಲ್ಲಾ, ರಾಜ್ಯಸಭಾ ಉಪಾಧ್ಯಕ್ಷ ಪಿ.ಜೆ.ಕುರಿಯನ್ ಮೊದಲಾದವರಿದ್ದರು.
ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಕೆಲವು ಹುತಾತ್ಮರ ಸದಸ್ಯರನ್ನು ಭೇಟಿ ಮಾಡಿ ಅವರ ಅಹವಾಲುಗಳನ್ನು ಸ್ವೀಕರಿಸಿದರು.2001, ಡಿಸೆಂಬರ್ 13ರಂದು ಐದು ಮಂದಿ ಶಸ್ತ್ರಸಜ್ಜಿತ ಬಂಧೂಕುಧಾರಿಗಳು ಸಂಸತ್ ಭವನ ಪ್ರವೇಶಿಸಿ ಒಂದೇ ಸಮನೆ ಗುಂಡಿನ ದಾಳಿ ನಡೆಸಿದರು. ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದರು. ಅಸುನೀಗಿದವರಲ್ಲಿ ಐದು ಮಂದಿ ದೆಹಲಿ ಪೊಲೀಸರು, ಮಹಿಳಾ ಪೊಲೀಸ್ ಅಧಿಕಾರಿ, ಸಂಸತ್ತು ಭವನದ ಸಿಬ್ಬಂದಿಯೂ ಸೇರಿದ್ದಾರೆ.