ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್(ಸಂಗ್ರಹ ಚಿತ್ರ) 
ದೇಶ

26/11 ರ ಉಗ್ರಗಾಮಿ ದಾಳಿಯ ತನಿಖೆ ಚುರುಕುಗೊಳಿಸಲು ಪಾಕಿಸ್ತಾನಕ್ಕೆ ಕೋರಿಕೆ: ಸುಷ್ಮಾ ಸ್ವರಾಜ್

ಕಳೆದ ವಾರ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್,ಪಾಕಿಸ್ತಾನದ ನಾಯಕರೊಂದಿಗೆ...

ನವದೆಹಲಿ: ಕಳೆದ ವಾರ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್,ಪಾಕಿಸ್ತಾನದ ನಾಯಕರೊಂದಿಗೆ 26/11ರ ಭಯೋತ್ಪಾದಕ ದಾಳಿಯನ್ನು ಪ್ರಸ್ತಾಪಿಸಿದ್ದು, ತನಿಖೆ ಚುರುಕುಗೊಳಿಸುವ ತನ್ನ ಭರವಸೆಯನ್ನು ಪಾಕಿಸ್ತಾನ ಈಡೇರಿಸುವಂತೆ ಅಲ್ಲಿನ ನಾಯಕರನ್ನು ಕೋರಿದ್ದಾರೆ.

ಈ ಕುರಿತು ಇಂದು ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ ನಡುವೆ ಹೇಳಿಕೆ ನೀಡಿದ ಸುಷ್ಮಾ ಸ್ವರಾಜ್, ಪಾಕಿಸ್ತಾನದ ಪ್ರವಾಸ ಸಂದರ್ಭದಲ್ಲಿ ಭಯೋತ್ಪಾದಕ ದಾಳಿ ಬಗ್ಗೆ ಅಲ್ಲಿನ ನಾಯಕರೊಂದಿಗೆ ಚರ್ಚಿಸಿದ್ದು, ತನಿಖೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಕೇಳಿಕೊಂಡಿದ್ದೇವೆ ಎಂದು ಹೇಳಿದ್ದಾರೆ.

 ಇಂದು ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷಗಳ ಸದಸ್ಯರು ತೀವ್ರ ಗದ್ದಲ, ಕೋಲಾಹಲವೆಬ್ಬಿಸಿದರು. ಇದರಿಂದಾಗಿ ಪಾಕಿಸ್ತಾನದ ಕುರಿತು ಸುಷ್ಮಾ ಸ್ವರಾಜ್ ಅವರು ಹೇಳಿಕೆ ನೀಡುತ್ತಿದ್ದಾಗ ಸ್ಪಷ್ಟವಾಗಿ ಕೇಳಿಸುತ್ತಿರಲಿಲ್ಲ. ಪಾಕಿಸ್ತಾನ ಭೇಟಿಯಲ್ಲಿನ ವಿಷಯಗಳನ್ನು ಅವರು ಸದನಕ್ಕೆ ವಿವರಿಸುತ್ತಿದ್ದರು.

ಈ ವೇಳೆ ಮಾತನಾಡಿದ ಅವರು, ಪಾಕಿಸ್ತಾನ ಸೇರಿದಂತೆ ಎಲ್ಲಾ ನೆರೆ ದೇಶಗಳೊಂದಿಗೆ ಶಾಶ್ವತ ಬಾಂಧವ್ಯ ಬೆಳೆಸಬೇಕೆಂಬುದು ಭಾರತದ ಬಯಕೆಯಾಗಿದೆ. ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಬೇಕೆಂಬ ಬಯಕೆ ಈಡೇರುತ್ತದೆ ಎಂಬ ಭರವಸೆಯಿದೆ ಎಂದರು.

ಸುಷ್ಮಾ ಸ್ವರಾಜ್ ಅವರು ತಮ್ಮ 2 ದಿನಗಳ ಪಾಕಿಸ್ತಾನ ಭೇಟಿ ಸಂದರ್ಭದಲ್ಲಿ ಅಲ್ಲಿನ ಪ್ರಧಾನಿ ನವಾಜ್ ಷರೀಫ್ ಮತ್ತು ಸಲಹೆಗಾರ ಸರ್ತಾಜ್ ಅಜೀಜ್ ಜೊತೆ ಮಾತುಕತೆ ನಡೆಸಿದ್ದರು. ಅವರು ಇಂದು ಅಪರಾಹ್ನ 2 ಗಂಟೆಗೆ ಲೋಕಸಭೆಯಲ್ಲಿ ಕೂಡ ಪಾಕಿಸ್ತಾನದ ಪ್ರವಾಸದ ಬಗ್ಗೆ ವಿವರ ನೀಡಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT