ಶಿಮ್ಲಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಕೃತಿ ದಹಿಸಿ ನಡೆಸಿದ ಪ್ರತಿಭಟನೆ 
ದೇಶ

ಪ್ರಧಾನಿ ಪ್ರತಿಕೃತಿ ದಹಿಸುವಾಗ ಬೆಂಕಿ ಅವಘಡ

ನ್ಯಾಷನಲ್ ಹೆರಾಲ್ಡ್ ಕೇಸಿಗೆ ಸಂಬಂಧಪಟ್ಟಂತೆ ಪ್ರಧಾನ ಮಂತ್ರಿಗಳ ಪ್ರತಿಕೃತಿ ದಹಿಸುವಾಗ ಉಂಟಾದ ಬೆಂಕಿ ಅವಘಡದಲ್ಲಿ...

ಶಿಮ್ಲಾ:  ನ್ಯಾಷನಲ್ ಹೆರಾಲ್ಡ್ ಕೇಸಿಗೆ ಸಂಬಂಧಪಟ್ಟಂತೆ ಪ್ರಧಾನ ಮಂತ್ರಿಗಳ ಪ್ರತಿಕೃತಿ ದಹಿಸುವಾಗ ಉಂಟಾದ ಬೆಂಕಿ ಅವಘಡದಲ್ಲಿ ಐದು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿರುವ ಘಟನೆ ಶಿಮ್ಲಾದ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದಿದೆ.

ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸುಖ್ ವಿಂದರ್ ಸಿಂಗ್ ಸುಕ್ಕು ಮತ್ತು ಸಚಿವರುಗಳು ಹಾಗೂ ಪಕ್ಷದ ಹಿರಿಯ ನಾಯಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸುಖ್ ವಿಂದರ್ ಸಿಂಗ್, ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಕಾಂಗ್ರೆಸ್ ಪಕ್ಷದ ವಿರುದ್ಧ ನಿಗೂಢ, ದುರುದ್ದೇಶಪೂರಿತ ಪ್ರಚಾರ ನಡೆಸುತ್ತಿದ್ದು, ಪ್ರಧಾನ ಮಂತ್ರಿಗಳು 2014ರ ಲೋಕಸಭಾ ಚುನಾವಣೆಗೆ ಮುನ್ನ ಘೋಷಿಸಿದಂತೆ ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಮಾಡಬೇಕೆಂಬುದು ಅದರ ಏಕಮೇವ ಉದ್ದೇಶವಾಗಿದೆ ಎಂದು ಆರೋಪಿಸಿದರು.

ನ್ಯಾಷನನ್ ಹೆರಾಲ್ಡ್ ಕೇಸು ಸಂಪೂರ್ಣವಾಗಿ ಸಂಪೂರ್ಣವಾಗಿ ರಾಜಕೀಯ ಪ್ರೇರಿತವಾಗಿದ್ದು, ಎನ್ ಡಿಎ ಸರ್ಕಾರದ ಹಗೆತನದ ರಾಜಕೀಯವಾಗಿದೆ ಎಂದು ಹೇಳಿದರು.
ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಕಾಂಗ್ರೆಸ್ ನಾಯಕತ್ವದ ವಿರುದ್ಧ ಅಪಪ್ರಚಾರ ಮಾಡಲು, ಮಾನಹಾನಿ ಮಾಡಲು ಯತ್ನಿಸುತ್ತಿದ್ದಾರೆ ಎಂದರು.

ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಜನತೆಗೆ ನೀಡಿದ್ದ ಆಶ್ವಾಸನೆಗಳಾದ ಕಪ್ಪು ಹಣ ವಾಪಸ್ಸು ತರಿಸುವುದು, ಹಣದುಬ್ಬರ ನಿಯಂತ್ರಣ, ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ವಿಫಲವಾಗಿರುವುದರಿಂದ ಜನರ ಮನಸ್ಸನ್ನು ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ನಾಯಕರನ್ನು ಗುರಿಯಾಗಿರಿಸಿಕೊಳ್ಳಲಾಗಿದೆ ಎಂ ದು ಸುಖ್ವೀರ್ ಆರೋಪಿಸಿದ್ದಾರೆ.

ಆದರೆ ಅಂತಹ ಪಿತೂರಿ ರಾಜಕಾರಣ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಹೇಳಿದರು.ಇದಕ್ಕೆ ಪ್ರತಿಕ್ರಿಯಿಸಿರುವ ಹಿಮಾಚಲ ಪ್ರದೇಶ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜೀವ್ ಬಿಂದಾಲ್  ಮತ್ತು ಮುಖ್ಯ ವಕ್ತಾರ ಗಣೇಶ್ ದತ್, ವಿವಾದಾತ್ಮಕ ವಿಷಯಗಳನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಎರಡು ಗುಣಮಟ್ಟವನ್ನು ಅನುಸರಿಸುತ್ತದೆ. ಐದು ಮಂದಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಕೃತಿ ದಹನ ಪ್ರಕರಣದ ಬಗ್ಗೆ ಅನುಮಾನ ಉಂಟಾಗುತ್ತಿದ್ದು, ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!