ದೇಶ

ಸಹಜಸ್ಥಿತಿಗೆ ಮರಳುತ್ತಿರುವ ತಮಿಳುನಾಡು: ಶಾಲಾ ಕಾಲೇಜು ಪುನರಾರಂಭ

Sumana Upadhyaya

ಚೆನ್ನೈ: ಚಂಡಮಾರುತದ ಪ್ರಭಾವದಿಂದ ತೀವ್ರ ಹಾನಿಗೊಳಗಾಗಿದ್ದ ತಮಿಳುನಾಡಿನಲ್ಲಿ ಪರಿಸ್ಥಿತಿ ಮತ್ತು ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಚೆನ್ನೈ ಹಾಗೂ ನೆರೆಯ ಜಿಲ್ಲೆಗಳ ಶಾಲಾ ಕಾಲೇಜುಗಳು ಪುನರಾರಂಭಗೊಂಡಿವೆ.

ತಮಿಳುನಾಡಿನ ಕೆಲ ಜಿಲ್ಲೆಗಳಲ್ಲಿ ಒಂದೂವರೆ ತಿಂಗಳಿಂದ ಸತತ ಮಳೆ ಸುರಿಯುತ್ತಿತ್ತು. ಹೀಗಾಗಿ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು ಮತ್ತಿತರ ಜಿಲ್ಲೆಗಳು ಪ್ರವಾಹ ಪೀಡಿತವಾಗಿದ್ದವು. ಅನೇಕ ಮಂದಿ ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ಇಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಅಲ್ಲದೇ ವಿವಿಯ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಈ ನಡುವೆ ಕೆಲವು ಪ್ರದೇಶಗಳಲ್ಲಿ ಪ್ರವಾಹ ಸಂತ್ರಸ್ತರು ಇನ್ನೂ ಶಾಲಾ-ಕಾಲೇಜುಗಳ ಕೊಠಡಿಗಳಲ್ಲೇ ಉಳಿದುಕೊಂಡಿದ್ದಾರೆ. ಅಲ್ಲಿ ಮಾತ್ರ ಇನ್ನೂ ಶಾಲಾ ಕಾಲೇಜು ಆರಂಭವಾಗಿಲ್ಲ.

ಇದೇ ಸಂದರ್ಭದಲ್ಲಿ ಈ ತಿಂಗಳ 18ರಿಂದ 23 ರವರೆಗೆ ನಿಗದಿಯಾಗಿರುವ ಕೇಂದ್ರ ನಾಗರಿಕ ಸೇವಾ ಪರೀಕ್ಷೆಗಳನ್ನು ಕನಿಷ್ಠ ಎರಡು ತಿಂಗಳು ಕಾಲ ಮುಂದೂಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಪ್ರಧಾನಿಗೆ ಮನವಿ ಮಾಡಿದ್ದಾರೆ.

SCROLL FOR NEXT