ಸಾಂದರ್ಭಿಕ ಚಿತ್ರ 
ದೇಶ

ನಕಲಿ ಎನ್ ಕೌಂಟರ್: ಮೂವರು ಪೊಲೀಸರಿಗೆ ಜೀವವಾಧಿ ಶಿಕ್ಷೆ

ಕಾಲೇಜು ಹುಡುಗಿಯೊಬ್ಬಳನ್ನು ನಕಲಿ ಎನ್ ಕೌಂಟರ್ ಮಾಡಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಮೂವರು...

ಗಾಝಿಯಾಬಾದ್: ಕಾಲೇಜು ಹುಡುಗಿಯೊಬ್ಬಳನ್ನು ನಕಲಿ ಎನ್ ಕೌಂಟರ್ ಮಾಡಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಮೂವರು ಪೊಲೀಸರಿಗೆ ಸಿಬಿಐ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಸುಮಾರು 15 ವರ್ಷಗಳ ಹಿಂದೆ ಮೀರತ್ ನ ದೌರಾಲ ಪ್ರದೇಶದಲ್ಲಿ 20ರ ಹರೆಯದ ಕಾಲೇಜು ಹುಡುಗಿಯೊಬ್ಬಳನ್ನು ಪೊಲೀಸರು ನಕಲಿ ಎನ್ ಕೌಂಟರ್ ಮಾಡಿದ್ದರು. 
ಉಪ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೌಶಿಕ್, ಕಾನ್ಸ್ ಟೇಬಲ್ ಭಗವಾನ್ ಸಹಾಯ್ ಮತ್ತು ನರೇಂದ್ರ ಕುಮಾರ್ ಶಿಕ್ಷೆಗೆ ಒಳಗಾದ ಮಾಜಿ ಪೊಲೀಸರು.
2000 ಜನವರಿ 14ರಂದು ಮೀರತ್ ನ ಸಿವಾಯ ಗ್ರಾಮದಲ್ಲಿ ಮೀರತ್ ಕಾಲೇಜಿನ ವಿದ್ಯಾರ್ಥಿನಿ ಸ್ಮಿತಾ ಭಾದುರಿ ಎಂಬುವವಳನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಅಲ್ಲದೇ, ಘಟನೆಯಲ್ಲಿ ಆಕೆಯ ಸ್ನೇಹಿತ ಮೋಹಿತ್ ತ್ಯಾಗಿ ಗಂಭೀರವಾಗಿ ಗಾಯಗೊಂಡಿದ್ದನು. ಈತ ಈ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದನು. 
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಸ್ವಯಂ ಪ್ರೇರಿತ ಕಾನೂನು ಪ್ರಕ್ರಿಯೆ ಆರಂಭಿಸಿತ್ತು ಮತ್ತು ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಲಾಗಿತ್ತು. ನಕಲಿ ಎನ್ ಕೌಂಟರ್ ಗೆ ಸಂಬಂಧಿಸಿ ಸಿಬಿಐ 21 ಸಾಕ್ಷ್ಯಗಳನ್ನು ಹಾಜರುಪಡಿಸಿತ್ತು. 
ಈ ಮೂವರು ಪೊಲೀಸರು ನಕಲಿ ಎನ್ ಕೌಂಟರ್ ಮಾಡಿದ್ದಾರೆ ಎಂದು ಆರೋಪ ಸಾಬೀತಾದ ಹಿನ್ನಲೆಯಲ್ಲಿ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ನವನೀತ್ ಕುಮಾರ್ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರು.15 ಲಕ್ಷ ದಂಡ ವಿಧಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ