ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ(ಸಂಗ್ರಹ ಚಿತ್ರ) 
ದೇಶ

ಸಂಸತ್ತು ಕಲಾಪಕ್ಕೆ ಅಡ್ಡಿಪಡಿಸುವವರ ದಾಖಲೆಗಳು ಇತಿಹಾಸ ಸೇರಲಿವೆ: ಅರುಣ್ ಜೇಟ್ಲಿ

ಕೇಂದ್ರ ಸರ್ಕಾರ ಮಹಾತ್ವಾಕಾಂಕ್ಷಿ ಸರಕು ಮತ್ತು ಸೇವಾ ತೆರಿಗೆ ಬಗ್ಗೆ ಚರ್ಚಿಸುವಾಗ, ಅದನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವಾಗ...

ನವದೆಹಲಿ: ಕೇಂದ್ರ ಸರ್ಕಾರ ಮಹಾತ್ವಾಕಾಂಕ್ಷಿ ಸರಕು ಮತ್ತು ಸೇವಾ ತೆರಿಗೆ ಬಗ್ಗೆ ಚರ್ಚಿಸುವಾಗ, ಅದನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವಾಗ ಪ್ರತಿಪಕ್ಷಗಳು ಅಡ್ಡಿಪಡಿಸಿರುವುದು ಭಾರತದ ಇತಿಹಾಸದಲ್ಲಿ ದಾಖಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಪ್ರತಿಕ್ರಿಯಿಸಿದ್ದಾರೆ.

ಸಂಸತ್ತಿನ ನಿಯಮಗಳಿಗೆ ಅಡ್ಡಿಪಡಿಸಿದರೆ ಅದು ಇತಿಹಾಸದಲ್ಲಿ ದಾಖಲಾಗುತ್ತದೆ. ಮುಂದಿನ ದಿನಗಳಲ್ಲಿ ಹಣಕಾಸು ಮಸೂದೆ ಮತ್ತು ಕಾರ್ಯಕಾರಿ ಕ್ರಮಕ್ಕೆ ನಮ್ಮ ನಿರ್ಧಾರಗಳನ್ನು ಬದಲಾಯಿಸಬೇಕಾಗಿದೆ ಎಂದರು.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸರಕು ಮತ್ತು ಸೇವಾ ತೆರಿಗೆ ಸೇರಿದಂತೆ ಪ್ರಮುಖ ಮಸೂದೆಗಳು ಎರಡೂ ಸದನಗಳಲ್ಲಿ ಒಪ್ಪಿಗೆ ಸಿಗುವುದಕ್ಕೆ ಸತತವಾಗಿ ಕಾಂಗ್ರೆಸ್ ಅಡ್ಡಿಪಡಿಸುತ್ತಿರುವುದು ಅಸಹ್ಯ ಹುಟ್ಟಿಸುತ್ತಿದೆ ಎಂದು ಅವರು ದೂರಿದರು.

ಸರಕು ಮತ್ತು ಸೇವಾ ತೆರಿಗೆ ಕುರಿತ ಕೈಗಾರಿಕೋದ್ಯಮಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳು ಒಪ್ಪಿಗೆಯಾಗದೆ ರಾಜ್ಯಸಭೆಯಲ್ಲಿ ತಡೆಯೊಡ್ಡಿದರೆ ಸರ್ಕಾರದ ಮುಂದಿನ ನಿರ್ಧಾರಗಳನ್ನು ಕಾರ್ಯಕಾರಿ ಕ್ರಮಗಳ ಮೂಲಕ ಮತ್ತು ಹಣಕಾಸು ಮಸೂದೆ ಮೂಲಕ ತರಬೇಕಾಗುತ್ತದೆ ಎಂದರು.

ಸರಕು ಮತ್ತು ಸೇವಾ ಮಸೂದೆಯು ಲೋಕಸಭೆಯಲ್ಲಿ ಒಪ್ಪಿಗೆ ಪಡೆದು ರಾಜ್ಯಸಭೆಗೆ ಹೋಗಿ ಅಲ್ಲಿ ಪ್ರತಿಪಕ್ಷಗಳ ಅಡ್ಡಿಯಿಂದಾಗಿ ಅಲ್ಲೇ ಉಳಿದಿದೆ. ರಾಜ್ಯಸಭೆಯಲ್ಲಿ ಎನ್ ಡಿಎಗೆ ಬಹುಮತವಿಲ್ಲ.

ಜಿಎಸ್ ಟಿ ಮಸೂದೆಯ ಇತಿಹಾಸದ ಬಗ್ಗೆ ಪ್ರಸ್ತಾಪಿಸಿದ ಅವರು, ಇಂದು ಅಡ್ಡಿಪಡಿಸುತ್ತಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ 2004ರಲ್ಲಿ ಇದರ ಬಗ್ಗೆ ಪ್ರಸ್ತಾಪಿಸಿತ್ತು. ಹಿಂದಿನ ಹಣಕಾಸು ಸಚಿವ ಚಿದಂಬರಂ 2006ರಲ್ಲಿ ಈ ಬಗ್ಗೆ ಮಾತನಾಡಿದ್ದರು. ಹಿಂದಿನ ಹಣಕಾಸು ಸಚಿವ ಪ್ರಣಬ್ ಮುಖರ್ಜಿಯವರು 2011ರಲ್ಲಿ ಸಂಸತ್ತಿನಲ್ಲಿ ಮಂಡಿಸಿದ್ದರು. ಆದರೂ ಇಂದು ಎನ್ ಡಿಎ ಸರ್ಕಾರದ ಯೋಜನೆಗೆ ಸಹಮತ ತೋರಿಸುತ್ತಿಲ್ಲ ಎಂದು ದೂರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ ರೂ. 8,500 ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು: ವಾರಸುದಾರರಿಗೆ ಪರಿಹಾರ ವಿತರಣೆ- ಸಿಎಂ ಸಿದ್ದರಾಮಯ್ಯ

Gaza deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ: ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ, BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

SCROLL FOR NEXT