ದೇಶ

ನ್ಯಾಷನಲ್ ಹೆರಾಲ್ಡ್ ಕೇಸ್; ಸೋನಿಯಾ, ರಾಹುಲ್ ಗೆ ಜಾಮೀನು ಅನುಮಾನ?

Sumana Upadhyaya

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿ ಅವರಿಗೆ ಜಾಮೀನು ಸಿಗುವ ಸಾಧ್ಯತೆ ಕಡಿಮೆಯಾಗಿದ್ದು, ಬಹುತೇಕ ಅವರು ಜೈಲಿಗೆ ಹೋಗುವವರಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ತಿಳಿಸಿದೆ.

ಇದೇ ಶನಿವಾರ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರ ಐದು ಮಂದಿ ಕಾಂಗ್ರೆಸ್ ನಾಯಕರನ್ನು ನ್ಯಾಷನಲ್ ಹೆರಾಲ್ಡ್ ಆಸ್ತಿ ಪರಭಾರೆ ಪ್ರಕರಣದ ಕುರಿತಂತೆ ಶನಿವಾರ ದೆಹಲಿಯ ಸ್ಥಳೀಯ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಸೋನಿಯಾ ಹಾಗೂ ರಾಹುಲ್ ಬೇಲ್ ಪಡೆಯುವ ಸಾಧ್ಯತೆ ಕಡಿಮೆ. ಅವರು ಜೈಲಿಗೆ ಹೋಗಲು ಸಿದ್ದರಾಗಿದ್ದಾರೆ ಎಂದು ಮೂಲಗಳು ಹೇಳಿರುವುದಾಗಿ ವರದಿ ತಿಳಿಸಿದೆ.

ಶನಿವಾರದಂದು ಕಾಂಗ್ರೆಸ್ ಪಕ್ಷದ ನಾಯಕರ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಮುಖ್ಯಮಂತ್ರಿಗಳ ಮತ್ತು ರಾಜ್ಯಗಳ ನಾಯಕರ ಸಭೆಯನ್ನು ದೆಹಲಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸದಸ್ಯ ಸುಬ್ರಹ್ಮಣ್ಯ ಸ್ವಾಮಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ದೂರಿನಲ್ಲಿ ಅವರು ಸೋನಿಯಾ ಗಾಂಧಿ ಕುಟುಂಬ ಮತ್ತು ಇತರ ಐದು ಮಂದಿ ವಿರುದ್ಧ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಆಸ್ತಿಯ ಪರಭಾರೆ ವಿವಾದ ಸುತ್ತಿಕೊಂಡಿದೆ.

SCROLL FOR NEXT