ವೆಂಕಯ್ಯ ನಾಯ್ಡು 
ದೇಶ

ಆರೋಪ ಮಾಡಿ ಪಲಾಯನ ಮಾಡುವುದು ಕಾಂಗ್ರೆಸ್ ತತ್ವ: ವೆಂಕಯ್ಯ ನಾಯ್ಡು

ಕಾಂಗ್ರೆಸ್ ಪಕ್ಷ ಆರೋಪ ಮಾಡಿ ಪಲಾಯನವಾದ ತತ್ವವನ್ನು ಅಳವಡಿಸಿಕೊಂಡಿದೆ ಎಂದು ವೆಂಕಯ್ಯ ನಾಯ್ಡು ಲೇವಡಿ ಮಾಡಿದ್ದಾರೆ.

ನವದೆಹಲಿ: ಸಂಸತ್ ಅಧಿವೇಶನ ಪ್ರಾರಂಭವಾದಾಗಿನಿಂದ ಸುಗಮ ಕಲಾಪಕ್ಕೆ ಕಾಂಗ್ರೆಸ್ ಅಡ್ಡಿ ಪಡಿಸುತ್ತಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು, ಕಾಂಗ್ರೆಸ್ ಪಕ್ಷ ಆರೋಪ ಮಾಡಿ ಪಲಾಯನವಾದ ತತ್ವವನ್ನು ಅಳವಡಿಸಿಕೊಂಡಿದೆ ಎಂದು ಲೇವಡಿ ಮಾಡಿದ್ದಾರೆ.
ಅಧಿವೇಶನದ ಮೊದಲ ದಿನದಿಂದ ಕಾಂಗ್ರೆಸ್ ಸದಸ್ಯರು ಸಂಸತ್ ನಲ್ಲಿ ಗದ್ದಲ ಉಂಟುಮಾಡುತ್ತಿದ್ದಾರೆ. ಪ್ರತಿಯೊಂದು ವಿಷಯದ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಿದೆ. ಆದರೆ ವಿರೋಧಪಕ್ಷದ ನಾಯಕರು ಚರ್ಚೆಗೆ ಸಿದ್ಧವಿಲ್ಲ. ಕಾಂಗ್ರೆಸ್ ನಾಯಕರು ಆರೋಪ ಮಾಡಿ ಪಲಾಯನ ಮಾಡುತ್ತಿದ್ದಾರೆ. ಸಂಸತ್ ಅಧಿವೇಶನವನ್ನು ವ್ಯರ್ಥಗೊಳಿಸಲು ಕಾಂಗ್ರೆಸ್ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಬಳಸಿಕೊಳ್ಳುತ್ತಿದೆ. ಈ ಮೂಲಕ ಸಂಸತ್ ಅಧಿವೇಶನಕ್ಕೆ ಅಡ್ಡಿಪಡಿಸಿ ಕೇಂದ್ರ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಯತ್ನಿಸುತ್ತಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಯತ್ನಿಸುತ್ತಿರುವ ಕಾಂಗ್ರೆಸ್ ಪಕ್ಷದ ನಡೆಯನ್ನು ದೇಶದ ಜನತೆ ನೋಡುತ್ತಿದ್ದಾರೆ. ಕಾಂಗ್ರೆಸ್ ನಾಯಕರಿಗೆ ನ್ಯಾಯಾಂಗದ ಮೇಲೆ ವಿಶ್ವಾಸವಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ, ಸಂಸತ್ ಮೂಲಕ ನ್ಯಾಯಾಂಗದ ಮೇಲೆ ಒತ್ತಡ ಹೇರಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ. 
ಸಂಸತ್ ಕಲಾಪಕ್ಕೆ ಅಡ್ಡಿಪಡಿಸುವುದರಿಂದ ಕೇಂದ್ರ ಸರ್ಕಾರಕ್ಕೆ ಕೆಟ್ಟ ಹೆಸರು ತರಬಹುದೆಂದು ಕಾಂಗ್ರೆಸ್ ಯೋಚಿಸುತ್ತಿದೆ, ಆದರೆ ಕಲಾಪ ವ್ಯರ್ಥವಾಗಿದ್ದಕ್ಕೆ ಅವರೂ ಸಹ ಉತ್ತರದಾಯಿಗಳು ಎಂಬುದು ನೆನಪಿನಲ್ಲಿರಬೇಕು ಎಂದು ಕೇಂದ್ರ ಸರ್ಕಾರದ ಮತ್ತೋರ್ವ ಸಚಿವ ರಾಜೀವ್ ಪ್ರತಾಪ್ ರೂಢಿ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ಈ ರಾತ್ರಿ ನನ್ನ ಜೊತೆ ಮಲಗು: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ನಿತಿ ಟೇಲರ್!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!