ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ (ಸಂಗ್ರಹ ಚಿತ್ರ) 
ದೇಶ

ಜೆಪಿಸಿ ತನಿಖೆಯೂ ಇಲ್ಲ, ರಾಜಿನಾಮೆಯೂ ಇಲ್ಲ: ಕೇಂದ್ರ ಸರ್ಕಾರ

ದೆಹಲಿ ಕ್ರಿಕೆಟ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅರುಣ್ ಜೇಟ್ಲಿ ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ ಮತ್ತು ಈ ಬಗ್ಗೆ ಜೆಪಿಸಿ ತನಿಖೆಯ ಅಗತ್ಯವೂ ಇಲ್ಲ ಎಂದು ಗುರುವಾರ ಕೇಂದ್ರ ಸರ್ಕಾರ ಹೇಳಿದೆ...

ನವದೆಹಲಿ: ದೆಹಲಿ ಕ್ರಿಕೆಟ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅರುಣ್ ಜೇಟ್ಲಿ ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ ಮತ್ತು ಈ ಬಗ್ಗೆ ಜೆಪಿಸಿ ತನಿಖೆಯ ಅಗತ್ಯವೂ ಇಲ್ಲ ಎಂದು ಗುರುವಾರ ಕೇಂದ್ರ ಸರ್ಕಾರ ಹೇಳಿದೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಮುಕ್ತಾರ್ ಅಬ್ಬಸ್ ನಖ್ವಿ ಅವರು, ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಇನ್ನೊಬ್ಬರ ಮೇಲೆ ಅಪಾದನೆ ಹೊರಿಸುವ ಚಾಳಿಯನ್ನು ಆಮ್ ಆದ್ಮಿ ಪಕ್ಷ ಈಗಲೂ ಮುಂದುವರೆಸಿದೆ. ಕಾಂಗ್ರೆಸ್ ಕೂಡ ಇದನ್ನೇ ಮಾಡುತ್ತಿತ್ತು. ಇದೇ ಕಾರಣಕ್ಕಾಗಿ ಅರುಣ್ ಜೇಟ್ಲಿ ವಿರುದ್ಧ ಆರೋಪ ಹೊರಿಸಲಾಗುತ್ತಿದೆ. ವೃಥಾ ಆರೋಪ ಹೊರಿಸಿ ಜಂಟಿ ಸಂಸದೀಯ ಸಮಿತಿ ತನಿಖೆಗೆ ಆಗ್ರಹಿಸುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಜೆಪಿಸಿ ರಚನೆ ಸಾಧ್ಯವಿಲ್ಲ. ಅಲ್ಲದೆ ಪ್ರಕರಣ ಸಂಬಂಧ ಜೇಟ್ಲಿ ಅವರು ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಏತನ್ಮಧ್ಯೆ ಮತ್ತೋರ್ವ ಕೇಂದ್ರ ಸಚಿವ ವೆಂಕಯ್ಯನಾಯ್ಡು ಅವರು ಕೂಡ ಜೇಟ್ಲಿ ಅವರ ಬೆನ್ನಿಗೆ ನಿಂತಿದ್ದು, ಸುಳ್ಳು ಆರೋಪಗಳಿಗೆ ಬೆಲೆ ನೀಡಿ ಜೇಟ್ಲಿ ಅವರು ರಾಜಿನಾಮೆ ನೀಡುವ ಅವಶ್ಯಕತೆ ಇಲ್ಲ. "ನನಗೊಂದು ಅರ್ಥವಾಗುತ್ತಿಲ್ಲ. ಕ್ರಿಕೆಟ್ ಸಂಸ್ಥೆಗೂ ಸಂಸತ್ತಿಗೂ ಏನು ಸಂಬಂಧ. ಜೇಟ್ಲಿ ಅವರ ಬಗ್ಗೆ ತಮಗೆ ಸಂಪೂರ್ಣ ವಿಶ್ವಾಸವಿದ್ದು, ಅವರು ಯಾವುದೇ ರೀತಿಯ ಭ್ರಷ್ಟಾಚಾರದಲ್ಲಿ ಪಾಲ್ಗೊಂಡಿಲ್ಲ. ಹೀಗಾಗಿ ಅವರು ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ನಾಯ್ಡು ಹೇಳಿದರು.

ಮತ್ತೊಂದೆಡೆ ಅರುಣ್ ಜೇಟ್ಲಿ ಅವರ ರಾಜಿನಾಮೆಗೆ ಪಟ್ಟು ಹಿಡಿದಿರುವ ಆಮ್ ಆದ್ಮಿ ಪಕ್ಷ, ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಕಚೇರಿ ಮೇಲೆ ನಡೆದ ದಾಳಿಗೂ ಡಿಡಿಸಿಎ ಭ್ರಷ್ಟಾಚಾರ  ಪ್ರಕರಣಕ್ಕೂ ಸಂಬಂಧವಿದೆ ಎಂದು ಆರೋಪಿಸಿದೆ. ಅಲ್ಲದೆ ಪ್ರಕರಣದಿಂದ ಜೇಟ್ಲಿ ಅವರನ್ನು ಬಚಾವ್ ಮಾಡಲೆಂದೇ ಸಿಎಂ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳನ್ನು ಛೂ ಬಿಟ್ಟು ದಾಳಿ ನಡೆಸಿದೆ. ಆದರೆ ಡಿಡಿಸಿಎ ಭ್ರಷ್ಟಾಚಾರ ಪ್ರಕರಣದ ಪ್ರಮುಖ ದಾಖಲೆಗಳು ತಮ್ಮ ಬಳಿಯೇ ಇದೆ ಎಂದು ಆಪ್ ಹೇಳಿಕೊಂಡಿದೆ.

ಒಟ್ಟಾರೆ ಸಿಎಂ ಅರವಿಂದ್ ಕೇಜ್ರಿವಾಲ್ ಕಚೇರಿ ಮೇಲಿನ ಸಿಬಿಐ ದಾಳಿ ಪ್ರಕರಣ ಇದೀಗ ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ನಡುವಿನ ತಿಕ್ಕಾಟಕ್ಕೆ ಕಾರಣವಾಗಿದ್ದು, ಅಧಿಕಾರಿಗಳ ವರ್ಗಾವಣೆ ವಿಚಾರದ ಬಳಿಕ ಬೂದಿ ಮುಚ್ಚಿದ ಕೆಂಡದಂತಿದ್ದ ಪರಿಸ್ಥಿತಿ ಇದೀಗ ಸರ್ಕಾರಗಳ ನಡುವಿನ ವಾಗ್ವಾದಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video