ಜೆ.ಪಿ. ರಾಜಖೋವಾ 
ದೇಶ

ಅರುಣಾಚಲ ಪ್ರದೇಶ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಲು ಕೇಂದ್ರಕ್ಕೆ ಕಾಂಗ್ರೆಸ್ ಒತ್ತಾಯ

ಅರುಣಾಚಲ ಪ್ರದೇಶ ರಾಜ್ಯಪಾಲರು ಅಸಾಂವಿಧಾನಿಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಕೇಂದ್ರ ಸರ್ಕಾರ ಅವರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ನವದೆಹಲಿ: ಅರುಣಾಚಲ ಪ್ರದೇಶ ರಾಜ್ಯಪಾಲರು ಅಸಾಂವಿಧಾನಿಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಕೇಂದ್ರ ಸರ್ಕಾರ ಅವರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ರಾಜ್ಯಪಾಲರು ಅಸಾಂವಿಧಾನಿಕ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂಬ ಆರೋಪವನ್ನು ಗುವಾಹಟಿ ಹೈಕೋರ್ಟ್ ಸಹ ಒಪ್ಪಿದ್ದು ಕೇಂದ್ರ ಸರ್ಕಾರ ರಾಜ್ಯಪಾಲರನ್ನು ವಾಪಸ್ ಕಲಿಸಬೇಕು ಎಂದು ಗುಲಾಂ ನಭಿ ಆಜಾದ್ ಆಗ್ರಹಿಸಿದ್ದಾರೆ.
‘ರಾಜ್ಯಪಾಲರು, ಸಚಿವ ಸಂಪುಟ ಮತ್ತು ಮುಖ್ಯಮಂತ್ರಿಯ ಒಪ್ಪಿಗೆ- ಶಿಫಾರಸು ಇಲ್ಲದೆಯೇ ವಿಧಾನ ಮಂಡಲದ ಅಧಿವೇಶನ ಕರೆದು, ಕಾರ್ಯಸೂಚಿ ನಿಗದಿ ಪಡಿಸಿದ್ದಾರೆ. ಆಸನ ವ್ಯವಸ್ಥೆ ಮಾಡಿಸಿದ್ದಾರೆ ಮತ್ತು ಕೈಗೆತ್ತಿಕೊಳ್ಳಬೇಕಾದ ವಿಷಯಗಳ ಆದ್ಯತೆ ನಿರ್ಧರಿಸಿದ್ದಾರೆ. ಇದು ಅಸಾಂವಿಧಾನಿಕ ಎಂದು ಕಾಂಗ್ರೆಸ್ ಆರೋಪಿಸಿದೆ.
ಅರುಣಾಚಲ ಪ್ರದೇಶದ 34 ಶಾಸಕರು ಮುಖ್ಯಮಂತ್ರಿ ನಬಂ ತುಕಿ ಹಾಗೂ ಅವರ ಸಂಪುಟ ಸಹೋದ್ಯೋಗಿಗಳ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿ,  ಕಲಿಖೋ ಪುಲ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದರು. ಇದಕ್ಕೂ ಮುನ್ನ ಸಭಾಧ್ಯಕ್ಷರನ್ನು ಪದಚ್ಯುತಗೊಳಿಸಲಾಗಿತ್ತು. ಸಭಾಧ್ಯಕ್ಷರನ್ನು ಪದಚ್ಯುತಗೊಳಿಸಿದ ಕ್ರಮ ಮತ್ತು ಗುರುವಾರ ಹೊಟೇಲ್‌ ಒಂದರಲ್ಲಿ ಸಭೆ ಸೇರಿ ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಅಂಗೀಕರಿಸಿ ಹೊಸ ಮುಖ್ಯಮಂತ್ರಿಯನ್ನು ನೇಮಿಸಿದ ಕ್ರಮಕ್ಕೆ ಗುವಾಹಾಟಿ ಹೈಕೋರ್ಟ್‌ ತಡೆಯಾಜ್ಞೆ  ನೀಡಿದೆ. ಸಂವಿಧಾನದ ಸಂಪ್ರದಾಯ ಮುರಿದಿದ್ದ  ರಾಜ್ಯಪಾಲ ಜೆ.ಪಿ. ರಾಜಖೋವಾ ಅವರು ವಿಧಾನಸಭಾ ಸ್ಪೀಕರ್‌ ಬದಲು, ತಾವೇ ವಿಧಾನಸಭೆ ಅಧಿವೇಶನ ಕರೆದು ಡಿ. 9ರಂದು ಅಧಿಸೂಚನೆ ಪ್ರಕಟಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರ ಕ್ರಮವನ್ನು ಸ್ಪೀಕರ್‌ ನಬಂ ರೆಬಿಯಾ ರಿಟ್‌ ಅರ್ಜಿ ಮೂಲಕ ಗುವಾಹಾಟಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ