ರಾಮ್ ದೇವ್ 
ದೇಶ

ಕಪ್ಪುಹಣ : ಕೇಂದ್ರ ಸರ್ಕಾರದ ಕ್ರಮಗಳಿಗೆ ಯೋಗ ಗುರುರಾಮ್ ದೇವ್ ಅಸಮಾಧಾನ

ವಿದೇಶದಲ್ಲಿರುವ ಕಪ್ಪುಹಣ ವಾಪಸ್ ತರಲು ಕೇಂದ್ರ ಸರ್ಕಾರದ ಕ್ರಮಗಳ ಬಗ್ಗೆ ಯೋಗ ಗುರು ಬಾಬಾ ರಾಮ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲಖನೌ: ವಿದೇಶದಲ್ಲಿರುವ ಕಪ್ಪುಹಣ ವಾಪಸ್ ತರಲು ಕೇಂದ್ರ ಸರ್ಕಾರದ ಕ್ರಮಗಳ ಬಗ್ಗೆ ಯೋಗ ಗುರು ಬಾಬಾ ರಾಮ್ ದೇವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲಖನೌ ದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮ್ ದೇವ್, "ಕಪ್ಪುಹಣ ವಾಪಸ್ ತರುವ ವಿಷಯವನ್ನು ನಾವ್ಯಾರೂ ಮರೆತಿಲ್ಲ, ಈ ಬಗ್ಗೆ ಹಣಕಾಸು ಸಚಿವ ಅರುಣ್ ಜೇಟ್ಲಿ ಹಾಗೂ ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿದ್ದೇನೆ, ಪ್ರಧಾನಿ ಮೋದಿ ಕಪ್ಪುಹಣ ವಾಪಸ್ ತರಲಿದ್ದಾರೆ ಎಂಬ ಭರವಸೆ ಇದೆ, ಅದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕಾಲಾವಕಾಶ ನೀಡಬೇಕು, ಶೀಘ್ರವೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಕೇಜ್ರಿವಾಲ್ ಅವರ ಕಾರ್ಯದರ್ಶಿ ಕಚೇರಿ ಮೇಲೆ ದಾಳಿ ನಡೆದಿರುವ ಬಗ್ಗೆಯೂ ಪ್ರತಿಕ್ರಿಯೆ ನೀಡಿರುವ ರಾಮ್ ದೇವ್, ಮುಖ್ಯಮಂತ್ರಿಯೊಬ್ಬರು ಕಳಂಕಿತ ಅಧಿಕಾರಿ ಬೆಂಬಲಕ್ಕೆ ನಿಂತಿರುವುದು ಇದೇ ಮೊದಲು, ಅರವಿಂದ್ ಕೇಜ್ರಿವಾಲ್  ಜೇಟ್ಲಿ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವುದು ವಿಷಾದನೀಯ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT