ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ ಒಂದು ರಾಜಕೀಯ ದ್ವೇಷ ಎಂದು ಹೇಳುತ್ತಿರುವ ಕಾಂಗ್ರೆಸ್ ವಿರುದ್ಧ ಕೇಂದ್ರ ಬಿಜೆಪಿ ಸಚಿವ ರವಿಶಂಕರ್ ಪ್ರಸಾದ್ ಕಿಡಿಕಾರಿದ್ದಾರೆ.
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸುಳ್ಳು ಹೇಳುವುದರಲ್ಲಿ ಬಹು ದೊಡ್ಡ ಪರಿಣಿತ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ಪ್ರಕರಣ ಸಂಬಂಧ ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಸಮಸ್ಯೆ ಇದ್ದರೇ ಸುಪ್ರೀಂ ಕೋರ್ಟ್ ಗೆ ಹೋಗಲಿ. ನಾವು ನಮ್ಮ ಸರ್ಕಾರ ಜನಾದೇಶದಂತೆ ನಡೆಯುತ್ತಿದ್ದೇವೆ ಎಂದು ಹೇಳಿದ್ದಾರೆ.
ಇನ್ನು ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡರು, ಇದೊಂದು ಕಾನೂನು ಸಂಬಂಧ ವಿಷಯವಾಗಿದ್ದು ಅದನ್ನು, ಕಾನೂನಿನಲ್ಲಿ ಇರುವ ಆಯ್ಕೆ ಮೂಲಕ ಬಗೆಹರಿಸಕೊಳ್ಳಲಾಗುತ್ತದೆ, ಇದಕ್ಕಾಗಿ ಪ್ರತಿಭಟನೆ ನಡೆಸುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ.