ನವದೆಹಲಿ: ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ಹಗರಣ ಪ್ರಕರಣವನ್ನು ಎಸ್ ಐಟಿ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ ಸಂಸದ ಕೀರ್ತಿ ಆಜಾದ್ ಕಾಂಗ್ರೆಸ್ ನಾಯಕರ ಜೊತೆ ಧ್ವನಿ ಗೂಡಿಸಿದ್ದಾರೆ.
ತಮ್ಮ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಇತರೆ ಕಾಂಗ್ರೆಸ್ ನಾಯಕರ ವಿರುದ್ಧ ಅರುಣ್ ಜೇಟ್ಲಿ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಇದರ ಬೆನ್ನಲ್ಲೇ ಇಂದು ಸಂಸತ್ತಿನಲ್ಲಿ ಬಿಜೆಪಿ ಸಂಸದ ಕೀರ್ತಿ ಆಜಾದ್ ಅವರು, ಅರುಣ್ ಜೇಟ್ಲಿ ಅವರೇ ನನ್ನ ವಿರುದ್ಧವೂ ಮಾನನಷ್ಟ ಮೊಕದ್ದಮೆ ದಾಖಲಿಸಿ ಎಂದು ಸವಾಲು ಹಾಕಿದ್ದಾರೆ.
ಅಲ್ಲದೇ, ಡಿಡಿಸಿಎ ಹಗರಣಕ್ಕೆ ಸಂಬಂಧಿಸಿದಂತೆ ಅರುಣ್ ಜೇಟ್ಲಿ ಅವರ ಮೇಲೆ ಕೇಳಿಬರುತ್ತಿರುವ ಆರೋಪಗಳ ಕುರಿತಂತೆ ಸೂಕ್ತ ತನಿಖೆ ನಡೆಸಬೇಕು ಅವರು ಆಗ್ರಹಿಸಿದ್ದಾರೆ. ಇತ್ತ ಕಾಂಗ್ರೆಸ್ ಜೇಟ್ಲಿ ಅವರ ರಾಜಿನಾಮೆಗೆ ಆಗ್ರಹಿಸಿದೆ.
ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಗಳನ್ನು ತಳ್ಳಿ ಹಾಕಿರುವ ಜೇಟ್ಲಿ, ವಿರೋಧ ಪಕ್ಷಗಳ ತಮ್ಮ ಮೇಲೆ ಮಾಡುತ್ತಿರುವ ಆರೋಪ ಆಧಾರರಹಿತವಾಗಿದೆ ಎಂದು ಹೇಳಿದ್ದಾರೆ. ಲೋಕಸಭೆ ಹಾಗೂ ರಾಜ್ಯಸಭೆಗಳೆರಡಲ್ಲೂ ಡಿಡಿಸಿಎ ಕುರಿತು ಗದ್ದಲ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics