ಬಿಜೆಪಿ ಸಂಸದ ಕೀರ್ತಿ ಆಜಾದ್ (ಸಂಗ್ರಹ ಚಿತ್ರ) 
ದೇಶ

ಜೇಟ್ಲಿ ಅವರೇ ನನ್ನ ಮೇಲೂ ಮಾನನಷ್ಟ ಮೊಕದ್ದಮೆ ಹಾಕಿ: ಕೀರ್ತಿ ಆಜಾದ್

ಡಿಡಿಸಿಎ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿ ಅರವಿಂದ ಕೇಜ್ರಿವಾಲ್ ವಿರುದ್ಧ ಸಿವಿಲ್ ಹಾಗೂ ಕ್ರಿಮಿನಲ್ ಮಾನಹಾನಿ ಮೊಕದ್ದಮೆ ಹೂಡಿರುವುದಕ್ಕೆ ಕಿಡಿಕಾರಿರುವ ಬಿಜೆಪಿ ಸಂಸದ ಕೀರ್ತಿ ಆಜಾದ್ ಜೇಟ್ಲಿ ಅವರೇ ನನ್ನ ಮೇಲೂ ಮಾನನಷ್ಟ ಮೊಕದ್ದಮೆ ದಾಖಲಿಸಿ ಎಂದು ಸೋಮವಾರ ಹೇಳಿದ್ದಾರೆ...

ನವದೆಹಲಿ: ಡಿಡಿಸಿಎ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿ ಅರವಿಂದ ಕೇಜ್ರಿವಾಲ್ ವಿರುದ್ಧ ಸಿವಿಲ್ ಹಾಗೂ ಕ್ರಿಮಿನಲ್ ಮಾನಹಾನಿ ಮೊಕದ್ದಮೆ ಹೂಡಿರುವುದಕ್ಕೆ ಕಿಡಿಕಾರಿರುವ ಬಿಜೆಪಿ ಸಂಸದ ಕೀರ್ತಿ ಆಜಾದ್ ಜೇಟ್ಲಿ ಅವರೇ ನನ್ನ ಮೇಲೂ ಮಾನನಷ್ಟ ಮೊಕದ್ದಮೆ ದಾಖಲಿಸಿ ಎಂದು ಸೋಮವಾರ ಹೇಳಿದ್ದಾರೆ.

ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಹಲೋ ಡಿಯರ್ ಅರುಣ್ ಜೇಟ್ಲಿ ಅವರೇ, ಕೇಜ್ರಿವಾಲ್ ಅವರ ವಿರುದ್ಧ ಮಾನನಷ್ಟ ನಷ್ಟ ಮೊಕದ್ದಮೆ ಹೂಡಿರುವ ನೀವು ನನ್ನ ಹೆಸರು ಮಾತ್ರ ಯಾಕೆ ಬಿಟ್ಟಿದ್ದೀರಿ. ನನ್ನ ಮೇಲೂ ಮೊಕದ್ದಮೆ ಹೂಡಿ ಎಂದು ಹೇಳಿದ್ದಾರೆ.

ಡೆಲ್ಲಿ ಆ್ಯಂಡ್ ಡಿಸ್ಟಿಕ್ಟ್ ಕ್ರಿಕೆಟ್ ಅಸೋಸಿಯೇಷನ್ (ಡಿಸಿಸಿಎ)ಯಲ್ಲಿ ಭಾರೀ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಆರೋಪ ಮಾಡಿರುವುದನ್ನು ಖಂಡಿಸಿದ್ದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷ ಮತ್ತೈವರು ನಾಯಕರು ಆಧಾರರಹಿತ ಮತ್ತು ದುರುದ್ದೇಶ ಪೂರಕವಾಗಿ ಆರೋಪಗಳನ್ನು ಮಾಡುತ್ತಿದ್ದಾರೆಂದು ಹೇಳಿದ್ದ ಜೇಟ್ಲಿ ಅವರು ಭಾರತೀಯ ದಂಡ ಸಂಹಿತೆ 500ರ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT