ಅರವಿಂದ್ ಕೇಜ್ರಿವಾಲ್ 
ದೇಶ

ಪ್ರಧಾನಿಗೆ ಧೈರ್ಯ ಇದ್ದರೆ ಜೇಟ್ಲಿಯನ್ನು ಸಂಪುಟದಿಂದ ವಜಾಗೊಳಿಸಲಿ: ಕೇಜ್ರಿವಾಲ್

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧೈರ್ಯ ಇದ್ದರೆ ವಿತ್ತ ಸಚಿವ ಅರುಣ್ ಜೇಟ್ಲಿ ಅವರನ್ನು ತಮ್ಮ ಸಚಿವ ಸಂಪುಟದಿಂದ ವಜಾಗೊಳಿಸಲಿ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧೈರ್ಯ ಇದ್ದರೆ ವಿತ್ತ ಸಚಿವ ಅರುಣ್ ಜೇಟ್ಲಿ ಅವರನ್ನು ತಮ್ಮ ಸಚಿವ ಸಂಪುಟದಿಂದ ವಜಾಗೊಳಿಸಲಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಸವಾಲು ಹಾಕಿದ್ದಾರೆ.
ಇಂದು ದೆಹಲಿ ವಿಶೇಷ ಅಧಿವೇಶನದಲ್ಲಿ ಮಾತನಾಡಿದ ಕೇಜ್ರಿವಾಲ್, ಸಿಬಿಐ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ಪ್ರಧಾನಿ ಸೂಚನೆಯಂತೆ ಸಿಬಿಐ ಕೆಲಸ ನಿರ್ವಹಿಸುತ್ತಿದೆ ಮತ್ತು ಪ್ರತಿಪಕ್ಷಗಳ್ನು ದುರ್ಬಲಗೊಳಿಸಲು ಮೋದಿ ಸಿಬಿಐಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ ಕೇವಲ ಅರುಣ್ ಜೇಟ್ಲಿ ಅವರನ್ನು ರಕ್ಷಿಸುವುದಕ್ಕಾಗಿಯೇ ದಾಳಿ ನಡೆಸಲಾಗಿದೆ ಎಂದರು.
ಬಿಜೆಪಿ ಇಂದು ನನ್ನ ಕಚೇರಿಯ ಮೇಲೆ ದಾಳಿ ನಡೆಸಿದ್ದು, ಮುಂದೊಂದು ದಿನ ಅಸ್ಸಾಂ ಅಥವಾ ಪಶ್ಚಿಮ ಬಂಗಾಳ ಮುಖ್ಯಮಂತ್ರಿಗಳ ಕಚೇರಿ ಮೇಲೂ ದಾಳಿ ನಡೆಸಬಹುದು ಎಂದರು.
ಇದೇ ವೇಳೆ ಸಿಬಿಐ ದಾಳಿಗೆ ಒಳಗಾಗಿದ್ದ ತಮ್ಮ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರನ್ನು ಬಲವಾಗಿ ಸಮರ್ಥಿಸಿಕೊಂಡ ದೆಹಲಿ ಸಿಎಂ, ಒಬ್ಬ ವ್ಯಕ್ತಿ ತಿಂಗಳಿಗೆ 1ರಿಂದ 2 ಲಕ್ಷ ಸಂಪಾದನೆ ಮಾಡುತ್ತಿರುವಾಗ, ಮನೆಯಲ್ಲಿ 27 ಲಕ್ಷ ಪತ್ತೆಯಾದರೆ ದೊಡ್ಡ ವಿಷವಲ್ಲ. ಮತ್ತು ಆ ಹಣಕ್ಕೆ ಅವರ ಬಳಿ ದಾಖಲೆ ಇದೆ ಎಂದರು.
ಭ್ರಷ್ಟಾಚಾರದ ವಿರುದ್ಧದ ಹೋರಾಟ ಹಾಗೂ ಪ್ರಾಮಾಣಿಕ ಅಧಿಕಾರಿಗಳ ರಕ್ಷಣೆಯೂ ನನ್ನ ಕೆಲಸವಾಗಿದೆ ಎಂದು ಕೇಜ್ರಿವಾಲ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯರ ಸಾಮೂಹಿಕೆ ಹತ್ಯೆಗೆ ಸಂಚು: ರೈಫಲ್ ಹಿಡಿದು ಅಮೆರಿಕದ ಹಿಂದೂ ದೇವಸ್ಥಾನಕ್ಕೆ ನುಗ್ಗಿದ್ದ ಶೂಟರ್; ಕೊನೆ ಕ್ಷಣದಲ್ಲಿ ಗನ್ ಜಾಮ್, ಆರೋಪಿ ಬಂಧನ..!

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?

1 ವರ್ಷ ಗ್ಯಾರಂಟಿ ಯೋಜನೆಗಳ ನಿಲ್ಲಿಸಿ, ಹಣವನ್ನು ರೈತರಿಗೆ ನೀಡಿ: ರಾಜ್ಯ ಸರ್ಕಾರಕ್ಕೆ ದಿಂಗಾಲೇಶ್ವರ ಶ್ರೀಗಳ ಆಗ್ರಹ