ಹೊತ್ತಿ ಉರಿದ ಬಿಎಸ್ಎಫ್ ವಿಮಾನ: 10 ಸೈನಿಕರ ದುರ್ಮರಣ
ಗಡಿಭಾಗಕ್ಕೆ ಎಂಜಿನೀಯರ್ಸ್ ಗಳನ್ನು ಕರೆದೊಯ್ಯುತ್ತಿದ್ದ ಬಿಎಸ್ಎಫ್ ವಿಮಾನ ಹೊತ್ತಿ ಉರಿದು 10 ಮಂದಿ ಸಾವನ್ನಪ್ಪಿರುವ ಘಟನೆ ದೆಹಲಿಯ ದ್ವಾರಾಕಾದಲ್ಲಿ ಸಂಭವಿಸಿದೆ. ...
ನವದೆಹಲಿ: ಗಡಿಭಾಗಕ್ಕೆ ಎಂಜಿನೀಯರ್ಸ್ ಗಳನ್ನು ಕರೆದೊಯ್ಯುತ್ತಿದ್ದ ಬಿಎಸ್ಎಫ್ ವಿಮಾನ ಹೊತ್ತಿ ಉರಿದು 10 ಮಂದಿ ಸಾವನ್ನಪ್ಪಿರುವ ಘಟನೆ ದೆಹಲಿಯ ದ್ವಾರಾಕಾದಲ್ಲಿ ಸಂಭವಿಸಿದೆ.
ಸೂಪರ್ ಕಿಂಗ್ ಹೆಸರಿನ ಬಿಎಸ್ ಎಫ್ ವಿಮಾನ ದೆಹಲಿಯಿಂದ ರಾಂಚಿಗೆ ತೆರಳುತ್ತಿತ್ತು. ವಿಮಾನ ನಿಲ್ದಾಣದಿಂದ ಟೇಕಾಫ್ ಆದ 5 ನಿಮಿಷದಲ್ಲೇ ವಿಮಾನ ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದ ಸೂಪರ್ ಕಿಂಗ್ ಲಘು ವಿಮಾನ ಸಂಪೂರ್ಣ ಹೊತ್ತಿ ಉರಿದಿದೆ.
ವಿಮಾನದಲ್ಲಿ ಸೈನಿಕರು, ಸೇರಿದಂತೆ ಒಟ್ಟು 12 ಮಂದಿ ಇದ್ದರೆಂದು ಹೇಳಲಾಗುತ್ತಿದೆ. ಬಿಎಸ್ ಎಫ್ ಕಮಾಂಡರ್ ಕೂಡ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಎರಡು ಶವಗಳು ಪತ್ತೆಯಾಗಿದ್ದು, ಸ್ಥಳಕ್ಕೆ 15 ಅಗ್ನಿಶಾಮಕ ವಾಹನ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿವೆ.
ಇನ್ನು ಘಟನಾ ಸ್ಥಳಕ್ಕೆ ಗೃಹ ಸಚಿವ ರಾಜನಾಥ್ ಸಿಂಗ್ ಆಗಮಿಸಿದ್ದಾರೆ. ತಾಂತ್ರಿಕ ದೋಷದಿಂದ ಈ ಅವಘಡ ಸಂಭವಿಸಿರಬಹುದೆಂದು ಹೇಳಲಾಗುತ್ತಿದೆ. ಪ್ರಕರಣದ ತನಿಖೆಗೆ ಕೇಂದ್ರ ವಿಮಾನಯಾನ ಸಚಿವಾಲಯ ಆದೇಶಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.