ಸುಮಿತ್ರಾ ಮಹಾಜನ್ 
ದೇಶ

ಕಾಂಗ್ರೆಸ್ ಸಂಸದರಿಗೆ ರಾಷ್ಟ್ರೀಯ ಹಿತಾಸಕ್ತಿ ಮುಖ್ಯವಲ್ಲ: ಸುಮಿತ್ರಾ ಮಹಾಜನ್

ಸಚಿವ ಅರುಣ್ ಜೇಟ್ಲಿ ರಾಜೀನಾಮೆಗೆ ಆಗ್ರಹಿಸಿ ಕಲಾಪಕ್ಕೆ ಅಡ್ಡಿ ಉಂಟು ಮಾಡಿದ ಕಾಂಗ್ರೆಸ್ ಸಂಸದರ ವರ್ತನೆ ಬಗ್ಗೆ ಸ್ಪೀಕರ್ ಸುಮಿತ್ರಾ ಮಹಾಜನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಡಿಡಿಸಿಎ ಭ್ರಷ್ಟಾಚಾರದಲ್ಲಿ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಅರುಣ್ ಜೇಟ್ಲಿ ರಾಜೀನಾಮೆಗೆ ಆಗ್ರಹಿಸಿ ಕಲಾಪಕ್ಕೆ ಅಡ್ಡಿ ಉಂಟು ಮಾಡಿದ ಕಾಂಗ್ರೆಸ್ ಸಂಸದರ ವರ್ತನೆ ಬಗ್ಗೆ ಸ್ಪೀಕರ್ ಸುಮಿತ್ರಾ ಮಹಾಜನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ಸಂಸತ್ ಕಲಾಪಕ್ಕೆ ಅಡ್ಡಿ ಉಂಟುಮಾಡುತ್ತಿರುವ ಕಾಂಗ್ರೆಸ್ ಸದಸ್ಯರಿಗೆ ರಾಷ್ಟ್ರೀಯ ಹಿತಾಸಕ್ತಿ ಮುಖ್ಯವಲ್ಲ, ಅವರದ್ದೇನಿದ್ದರೂ ಪಟ್ಟಭದ್ರ ಹಿತಾಸಕ್ತಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಿಡಿಸಿಎ ಭ್ರಷ್ಟಾಚಾರದಲ್ಲಿ ಅರುಣ್ ಜೇಟ್ಲಿ ವಿರುದ್ಧ ಆರೋಪ ಕೇಳಿಬಂದಿದ್ದು, ಅರುಣ್ ಜೇಟ್ಲಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಪರಿಣಾಮ ಲೋಕಸಭೆಯ ಪ್ರಶ್ನೋತ್ತರ ಕಲಾಪ ಮುಂದೂಡಲಾಗಿದ್ದು,  ಸಂಸತ್ ಕಲಾಪ ವ್ಯರ್ಥವಾಗಿದೆ. ರಾಷ್ಟ್ರೀಯ ಹಿತಾಸಕ್ತಿ ದೃಷ್ಟಿಯಿಂದಲಾದರೂ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ಕೈಬಿಟ್ಟು ಚರ್ಚೆಯಲ್ಲಿ ಪಾಲ್ಗೊಳ್ಳಲಿ ಎಂದು ಸುಮಿತ್ರಾ ಮಹಾಜನ್ ಸಲಹೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ