ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾ. ವಿ ಎಸ್ ಮಳೀಮಠ್ ನಿಧನ
ರಾಜ್ಯ ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ವಿ ಎಸ್ ಮಳೀಮಠ್(86) ಬುಧವಾರ ವಿಧಿವಶ...
ಬೆಂಗಳೂರು: ರಾಜ್ಯ ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ವಿ ಎಸ್ ಮಳೀಮಠ್(86) ಬುಧವಾರ ವಿಧಿವಶರಾಗಿದ್ದಾರೆ.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನ್ಯಾ.ವಿಎಸ್.ಮಳೀಮಠ್ ಇಂದು ಬೆಳಿಗ್ಗೆ ನಿಧನರಾಗಿದ್ದು, ನಾಳೆ ಬೆಳಗ್ಗೆ ಚಾಮರಾಜಪೇಟೆಯಲ್ಲಿ ಅಂತ್ಯಕ್ರಿಯೆ ನೆರವೇರವೇರಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರಸ್ತುತ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಸದಸ್ಯರಾಗಿದ್ದರು. 1968ರಲ್ಲಿ ಅಡ್ವಕೇಟ್ ಜನರಲ್ ಆಗಿದ್ದ ಮಳೀಮಠ್, ತದ ನಂತರ ಕರ್ನಾಟಕ, ಕೇರಳ ಹೈಕೋರ್ಟ್ ನ ಸಿಜೆ ಹುದ್ದೆ ನಿರ್ವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.