ನವದೆಹಲಿ: ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಒತ್ತಡದಿಂದ ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಡಿಡಿಸಿಎ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣಗೊಳ್ಳುವವರೆಗೆ ಕಾಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು, ಆದರೆ ವಸುಂದರಾ ರಾಜೆ, ಸುಷ್ಮಾ ಸ್ವರಾಜ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ವಿರುದ್ಧ ಆರೋಪ ಕೇಳಿಬಂದಾಗ ಪ್ರಧಾನಿ ಮೋದಿ ಈ ರೀತಿಯ ಹೇಳಿಕೆ ನೀಡಿರಲಿಲ್ಲ ಎಂದು ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಹೇಳಿದ್ದಾರೆ.
ರಾಜಕೀಯ ಒತ್ತಡದಿಂದ ಅರುಣ್ ಜೇಟ್ಲಿ ಅವರನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂಬುದು ಪ್ರಧಾನಿ ಮೋದಿ ಅವರ ಹೇಳಿಕೆಯಿಂದ ಸ್ಪಷ್ಟವಾಗುತ್ತದೆ. ವಿತ್ತ ಸಚಿವರಾಗಿರುವ ಅರುಣ್ ಜೇಟ್ಲಿ ಅವರು ನೈತಿಕ ಕರ್ತವ್ಯವನ್ನು ಹೊಂದಿದ್ದಾರೆ ಅದನ್ನು ಪಾಲಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವುದು ಅವರಿಗೆ ಬಿಟ್ಟ ವಿಚಾರ ಎಂದು ಸಂದೀಪ್ ದೀಕ್ಷಿತ್ ಹೇಳಿದ್ದಾರೆ.