ಉ.ಪ್ರದೇಶದಲ್ಲಿ ಮೈತ್ರಿ ಕುರಿತ ರಾಹುಲ್ ಮಾತು ದುರ್ಬಲತೆಯನ್ನು ತೋರಿಸುತ್ತದೆ: ಬಿಜೆಪಿ
ಮುಂಬರುವ ಉತ್ತರ ಪ್ರದೇಶ ವಿಧಾಸಭೆ ಚುನಾವಣೆಯಲ್ಲಿ ಮೈತ್ರಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ...
ಲಖನೌ: ಮುಂಬರುವ ಉತ್ತರ ಪ್ರದೇಶ ವಿಧಾಸಭೆ ಚುನಾವಣೆಯಲ್ಲಿ ಮೈತ್ರಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಉತ್ತರ ಪ್ರದೇಶ ಬಿಜೆಪಿ, ಕಾಂಗ್ರೆಸ್ ರಾಜ್ಯದಲ್ಲಿ ರಾಜಕೀಯ ಮೈತ್ರಿ ಮಾಡಿಕೊಳ್ಳುವ ಮೂಲಕ ಜನರನ್ನು ಮೂರ್ಖರನ್ನಾಗಿ ಮಾಡಲು ಹೊರಟಿದೆ ಎಂದಿದೆ.
2017ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಬಯಸಿದರೆ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಸಿದ್ಧವಿದೆ ಎಂದು ನಿನ್ನೆಯಷ್ಟೇ ರಾಹುಲ್ ಗಾಂಧಿ ಹೇಳಿದ್ದರು.
ಇಂದು ರಾಹುಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ರಾಜ್ಯ ಬಿಜೆಪಿ ವಕ್ತಾರ ವಿಜಯ್ ಬಹದ್ದೂರ್ ಪಾಠಕ್ ಅವರು, ರಾಹುಲ್ ಅವರ ಮೈತ್ರಿ ಮಾತು ಅವರ ದುರ್ಬಲತೆಯನ್ನು ತೋರಿಸುತ್ತದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಈಗಾಗಲೇ ಕೆಲವು ಪಕ್ಷಗಳೊಂದಿಗೆ ಅಲಿಖಿತ ಮೈತ್ರಿ ಮಾಡಿಕೊಂಡಿದೆ. ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷ 10 ವರ್ಷಗಳ ಕಾಲ ಯುಪಿಎ ಸರ್ಕಾರದ ಮಿತ್ರ ಪಕ್ಷಗಾಳಿದ್ದವು ಎಂದು ಪಾಠಕ್ ಹೇಳಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.