ಹಿಂದೆ ವಾಜಪೇಯಿ ಲಾಹೋರ್ಗೆ ಭೇಟಿ ನೀಡಿದಾಗ ಕಾರ್ಗಿಲ್ ಯುದ್ಧವಾಗಿತ್ತು, ಈಗ ಏನಾಗುತ್ತೋ? ಕಾಂಗ್ರೆಸ್
ಪ್ರಧಾನಿ ನರೇಂದ್ರ ಮೋದಿ ಅವರ ದಿಢೀರ್ ಪಾಕಿಸ್ತಾನ ಭೇಟಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರತಿಪಕ್ಷ ಕಾಂಗ್ರೆಸ್,...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ದಿಢೀರ್ ಪಾಕಿಸ್ತಾನ ಭೇಟಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರತಿಪಕ್ಷ ಕಾಂಗ್ರೆಸ್, ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಅವರು ಲಾಹೋರ್ಗೆ ಭೇಟಿ ನೀಡಿದ ನಂತರ ಕಾರ್ಗಿಲ್ ಯುದ್ಧ ನಡೆದಿತ್ತು. ಈಗ ಏನಾಗುತ್ತೋ? ಎಂದು ಪ್ರಶ್ನಿಸಿದೆ.
ಮೋದಿಯ ಪಾಕ್ ಭೇಟಿಯನ್ನು ಕಟುವಾಗಿ ಟೀಕಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಮನಿಶ್ ತಿವಾರಿ, ಮೋದಿ ಪಾಕ್ ಭೇಟಿ ಅತ್ಯಂತ ಕೆಟ್ಟ ರಾಜತಾಂತ್ರಿಕತೆಯ ಪ್ರದರ್ಶನ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಕಳೆದ ಬಾರಿ ವಾಜಪೇಯಿ ಅವರು ಭೇಟಿ ನೀಡಿದಾಗ ಕಾರ್ಗಿಲ್ ಯುದ್ಧವಾಗಿತ್ತು. ಈಗ ಏನಾಗುತ್ತೋ? ಎಂದಿದ್ದಾರೆ.
ಅಫ್ಘಾನಿಸ್ತಾನ ಪ್ರವಾಸದ ಬಳಿಕ ಕಾಬೂಲ್ನಿಂದ ನೇರವಾಗಿ ಲಾಹೋರ್ಗೆ ಭೇಟಿ ನೀಡಿದ ಪ್ರಧಾನಿ ಮೋದಿ, ಇಂದು 66 ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರಿಗೆ ಶುಭ ಕೋರಿದರು. ಅಲ್ಲದೆ ಅವರ ನಿವಾಸಕ್ಕೂ ತೆರಳಿ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.