ಅರವಿಂದ್ ಕೇಜ್ರಿವಾಲ್ 
ದೇಶ

ಡಿಡಿಸಿಎ ತನಿಖೆ ವಿರೋಧಿಸುವುದಾದರೆ ಕೇಂದ್ರ ಕೋರ್ಟ್‌ಗೆ ಹೋಗಲಿ: ಕೇಜ್ರಿವಾಲ್

ಡಿಡಿಸಿಎಂ ಹಗರಣದ ತನಿಖೆ ಸಂಬಂಧ ರಚನೆಯಾಗಿರುವ ತನಿಖಾ ಆಯೋಗದ ಬಗ್ಗೆ ಯಾವುದೇ ಸಮಸ್ಯೆ ಇದ್ದರೆ ಕೇಂದ್ರ ಸರ್ಕಾರ ಕೋರ್ಟ್ ಹೋಗಲಿ...

ನವದೆಹಲಿ: ಡಿಡಿಸಿಎಂ ಹಗರಣದ ತನಿಖೆ ಸಂಬಂಧ ರಚನೆಯಾಗಿರುವ ತನಿಖಾ ಆಯೋಗದ ಬಗ್ಗೆ ಯಾವುದೇ ಸಮಸ್ಯೆ ಇದ್ದರೆ ಕೇಂದ್ರ ಸರ್ಕಾರ ಕೋರ್ಟ್ ಹೋಗಲಿ. ಆದರೆ ಎಎಪಿ ಸರ್ಕಾರ ಮಾತ್ರ ತನ್ನ ಕ್ರಮದಿಂದ ಹಿಂದೆ ಸರಿಯುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ.
'ನಾವು ನಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಡಿಡಿಸಿಎ ಹಗರಣ ಸಂಬಂಧ ದೆಹಲಿ ಸರ್ಕಾರ ರಚಿಸಿರುವ ತನಿಖಾ ಆಯೋಗದ ಬಗ್ಗೆ ಗೃಹ ಸಚಿವಾಲಯಕ್ಕೆ ಯಾವುದೇ ಸಮಸ್ಯೆಗಳಿದ್ದರೆ ಹೈಕೋರ್ಟ್‌ಗೆ ಹೋಗಲಿ' ಎಂದಿದ್ದಾರೆ.
ಜನರಿಂದ ಆಯ್ಕೆಯಾದ ದೆಹಲಿ ಸರ್ಕಾರಕ್ಕೆ ತನಿಖಾ ಆಯೋಗ ರಚಿಸುವ ಅಧಿಕಾರ ಇದೆ. ಹೀಗಾಗಿ ಕೇಂದ್ರ ಸರ್ಕಾರ ತನಿಖಾ ಆಯೋಗದ ಮಾನ್ಯತೆ ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಕೆಲವು ದಿನಗಳ ಹಿಂದೆ ತನಿಖಾ ಆಯೋಗದ ಕಾನೂನು ಮಾನ್ಯತೆ ಪ್ರಶ್ನಿಸಿ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರು, ಈ ಸಂಬಂಧ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ