ಪೃಥ್ವಿರಾಜ್ ಚವಾಣ್ 
ದೇಶ

ರಾಹುಲ್ ಸಂಸತ್ತಿನಲ್ಲಿ ಹೆಚ್ಚು ಮಾತನಾಡಬೇಕು: ಪೃಥ್ವಿರಾಜ್ ಚವಾಣ್

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಹೆಚ್ಚು ಮಾತನಾಡಬೇಕು ಎಂದು ಮಹಾರಾಷ್ಟ್ರ ಮಾಜಿ...

ಮುಂಬೈ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಹೆಚ್ಚು ಮಾತನಾಡಬೇಕು ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಅವರು ಶನಿವಾರ ಹೇಳಿದ್ದಾರೆ.
ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಆಡಳಿತರೂಢ ಬಿಜೆಪಿ ವಿರುದ್ಧ ತಮ್ಮ ಅಕ್ರಮಣಶೀಲ ಹೋರಾಟವನ್ನು ಮತ್ತಷ್ಟು ಹೆಚ್ಚಿಸಬೇಕು. ಅಲ್ಲದೆ ಜನಸಾಮಾನ್ಯರಲ್ಲಿ ವಿಶ್ವಾಸಾರ್ಹತೆಯನ್ನು ಮೂಡಿಸಲು ಅವರು ತಮ್ಮ ಆಂಗಿಕ ಭಾಷೆಯನ್ನು ಸುಧಾರಿಸಿಕೊಳ್ಳಬೇಕು ಎಂದು ಮಹಾ ಮಾಜಿ ಸಿಎಂ ಸಲಹೆ ನೀಡಿದ್ದಾರೆ.
ಈಗ ಸಂಸತ್ತಿನ ಎರಡೂ ಸದನಗಳ ಕಲಾಪ ನೇರ ಪ್ರಸಾರವಾಗುತ್ತದೆ. ಹೀಗಾಗಿ ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಪರಿಣಾಮಕಾರಿಯಾಗಿ ಹಾಗೂ ಹೆಚ್ಚು ಹೆಚ್ಚು ಮಾತನಾಡಿದರೆ ಅವರ ವಿಶ್ವಾಸಾರ್ಹತೆ ಹೆಚ್ಚಲಿದೆ ಎಂದರು.
ಒಂದು ಸಾಲಿನಲ್ಲಿ ಹೇಳಿದರೆ ಅದು ಅಷ್ಟು ಪರಿಣಾಮಕಾರಿಯಾಗಿರುವುದಿಲ್ಲ. ಹೀಗಾಗಿ ಅವರು ನಿರಂತರವಾಗಿ ಸುಮಾರು 45 ನಿಮಿಷಗಳಿಂದ 1 ಗಂಟೆಗಳ ಕಾಲ ಮಾತನಾಡಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT