ಶಾಸಕ ಸಂಗೀತ್ ಸೋಮ್'ಗೆ ಇಸಿಸ್ ನಿಂದ ಬೆದರಿಕೆ ಕರೆ
ಬಿಜೆಪಿ ಶಾಸಕ ಸಂಗೀತ್ ಸೋಮ್ ಅವರಿಗೆ ಶನಿವಾರ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಸಿರಿಯಾ (ಇಸಿಸ್) ಉಗ್ರ ಸಂಘಟನೆಯಿಂದ ಬೆದರಿಕೆ ಕರೆ ಬಂದಿರುವುದಾಗಿ ಶನಿವಾರ ತಿಳಿದುಬಂದಿದೆ...
ಸರ್ಧಾನ(ಉತ್ತರ ಪ್ರದೇಶ): ಬಿಜೆಪಿ ಶಾಸಕ ಸಂಗೀತ್ ಸೋಮ್ ಅವರಿಗೆ ಶನಿವಾರ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಸಿರಿಯಾ (ಇಸಿಸ್) ಉಗ್ರ ಸಂಘಟನೆಯಿಂದ ಬೆದರಿಕೆ ಕರೆ ಬಂದಿರುವುದಾಗಿ ಶನಿವಾರ ತಿಳಿದುಬಂದಿದೆ.
ಬೆದರಿಕೆ ಕರೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಂಗೀತ್ ಸೋಮ್ ಅವರು, ಇಸಿಸ್ ಉಗ್ರ ಸಂಘಟನೆಯಿಂದ ಬೆದರಿಕೆ ಕರೆಯೊಂದು ಬಂದಿದ್ದು, ಅಂತರ್ಜಾಲದ ಮೂಲಕ ಬಂದಿರುವ ಕರೆಯಾಗಿದೆ ಎಂದು ಹೇಳಿಕೊಂಡಿದ್ದಾರೆ.
ಇತ್ತೀಚೆಗಷ್ಟೇ ಇಸಿಸ್ ಸೇರಲು ಯತ್ನ ನಡೆಸಿದ್ದ ತೆಲಂಗಾಣ ಮೂಲದ ಮೂವರು ವಿದ್ಯಾರ್ಥಿಗಳನ್ನು ತೆಲಂಗಾಣ ಪೊಲೀಸ್ ಮತ್ತು ಮಹಾರಾಷ್ಟ್ರ ಉಗ್ರ ನಿಗ್ರಹ ದಳದ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧನಕ್ಕೊಳಪಡಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.