ದೇಶ

2016 ರಿಂದ ಸುರಕ್ಷಿತ ಮತ್ತು ಸೌಹಾರ್ದಯುತ ಭಾರತ: ರಾಜನಾಥ್ ಸಿಂಗ್ ಭರವಸೆ

Srinivasamurthy VN

ನವದೆಹಲಿ: ನೂತನ 2016ನೇ ವರ್ಷದಿಂದ ದೇಶದಲ್ಲಿ ಶಾಂತಿ, ಭದ್ರತೆ ಹಾಗೂ ಸೌಹಾರ್ದಯುತ ವಾತಾವರಣ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್  ಸಿಂಗ್ ಜನತೆಗೆ ಭರವಸೆ ನೀಡಿದ್ದಾರೆ.

ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ದೇಶದಲ್ಲಿ ಶಾಂತಿ, ಭದ್ರತೆ ಹಾಗೂ ಸಾಮರಸ್ಯ ಕಾಪಾಡಿಕೊಂಡು ಬರುವುದು  ನಮ್ಮ ಆದ್ಯತೆಯಾಗಿದೆ. ಪ್ರಮುಖವಾಗಿ ಮಹಿಳೆಯರಿಗೆ ಸೂಕ್ತ ರಕ್ಷಣೆ ಒದಗಿಸುವುದಕ್ಕೆ ನಮ್ಮ ಸರ್ಕಾರದಿಂದ ಒತ್ತು ನೀಡಲಾಗುವುದು ಎಂದು ಅವರು ಹೇಳಿದರು. "2015ರಲ್ಲಿ ಕೇಂದ್ರ ಸರ್ಕಾರ  ಕೈಗೊಂಡ ಭದ್ರತಾ ಕ್ರಮಗಳಿಂದಾಗಿ ಪರಿಣಾಮಕಾರಿ ಸುಧಾರಣೆ ತಂದಿದೆ. ಪ್ರಮುಖವಾಗಿ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಮತ್ತು ಈಶಾನ್ಯ ಭಾರತದ ರಾಜ್ಯಗಳಲ್ಲಿ ಶಾಂತಿ ಸುವ್ಯವಸ್ಥೆ  ಸುಧಾರಣೆ ಕಂಡಿದೆ ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ಸೂಕ್ಷ್ಮ ಪ್ರದೇಶಗಳಲ್ಲಿ ಕೇಂದ್ರ ಸರ್ಕಾರ ಮತ್ತು ಭದ್ರತಾ ಪಡೆಗಳು ಕೈಗೊಂಡ ಸುಧಾರಣಾ ಕ್ರಮದಿಂದಾಗಿ ಅಲ್ಲಿ ಹಿಂಸಾತ್ಮಕ ಪ್ರಕರಣಗಳ ಸಂಖ್ಯೆ ಗಣನೀಯವಾಗಿ  ಇಳಿದಿದೆ. ಮಹಿಳೆಯರ ವಿರುದ್ಧದ ಪ್ರಕರಣಗಳನ್ನು ತನಿಖೆ ನಡೆಸಲು ವಿಶೇಷ ತನಿಖಾ ಘಟಕಗಳನ್ನು ತೆರಯಲಾಗಿದೆ. ಅಂತೆಯೇ 2016ರಲ್ಲಿ ಅಪರಾಧ ಮತ್ತು ಹಿಂಸಾತ್ಮಕ ಘಟನೆಗಳಿಗೆ  ಕಡಿವಾಣ ಹಾಕಲು ಪ್ರಯತ್ನಿಸಲಾಗುವುದು. ಪೊಲೀಸ್ ಪಡೆಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ನಿಗದಿಪಡಿಸಿರುವುದು ಕೇಂದ್ರ ಸರ್ಕಾರದ ಪ್ರಮುಖ ತೀರ್ಮಾನವಾಗಿದೆ ಎಂದು  ರಾಜನಾಥ್ ಸಿಂಗ್ ಹೇಳಿದರು.

SCROLL FOR NEXT