ನರೇಂದ್ರ ಮೋದಿ 
ದೇಶ

ಜ.16 ಕ್ಕೆ ಸ್ಟಾರ್ಟ್ ಅಪ್ ಇಂಡಿಯಾ, ಸ್ಟಾಂಡ್ ಅಪ್ ಇಂಡಿಯಾದ ಕ್ರಿಯಾ ಯೋಜನೆ ಬಿಡುಗಡೆ: ಮೋದಿ

ಜ.16 ರಂದು ಸ್ಟಾರ್ಟ್ ಅಪ್ ಇಂಡಿಯಾ, ಸ್ಟಾಂಡ್ ಅಪ್ ಇಂಡಿಯಾ ಯೋಜನೆಯ ಕ್ರಿಯಾ ಯೋಜನೆ ಬಿಡುಗಡೆಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ಜ.16 ರಂದು ಸ್ಟಾರ್ಟ್ ಅಪ್ ಇಂಡಿಯಾ, ಸ್ಟಾಂಡ್ ಅಪ್ ಇಂಡಿಯಾ ಯೋಜನೆಯ ಕ್ರಿಯಾ ಯೋಜನೆ ಬಿಡುಗಡೆಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮನ್ ಕಿ ಬಾತ್ ನಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸರ್ಕಾರ ಹೊಸ ಉದ್ಯಮಗಳನ್ನು ಪ್ರೋತ್ಸಾಹಿಸುತ್ತದೆ. ಹೊಸ ಆಲೋಚನೆ ಹಾಗೂ ನಾವೀನ್ಯತೆಯನ್ನು ಗುರಿಯಾಗಿರಿಸಿಕೊಳ್ಳಬೇಕಿದೆ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
ಸ್ಟಾರ್ಟ್ ಅಪ್ ಇಂಡಿಯಾ, ಸ್ಟಾಂಡ್ ಅಪ್ ಇಂಡಿಯಾ ದೇಶದ ಯುವಕರಿಗೆ ಹೊಸ ಅವಕಾಶ ನೀಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಉತ್ಪಾದನೆ, ಕೃಷಿ, ಕ್ಷೇತ್ರಗಳು ಸೇರಿದಂತೆ ಎಲ್ಲಾ ವಲಯಗಳಿಗೂ ಸ್ಟಾರ್ಟ್ ಅಪ್ ಇಂಡಿಯಾ, ಸ್ಟಾಂಡ್ ಅಪ್ ಇಂಡಿಯಾ ಯೋಜನೆ ಸಹಕಾರಿಯಾಗಲಿದೆ ಎಂದು ಮೋದಿ ಹೇಳಿದ್ದಾರೆ.
ಐಐಟಿ ಹಾಗೂ ಐಐಎಂ, ಕೇಂದ್ರ ವಿಶ್ವವಿದ್ಯಾನಿಲಯಗಳು, ಎನ್ ಐಟಿಗಳಲ್ಲಿರುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಸಹ ಈ ಕಾರ್ಯಕ್ರಮದೊಂದಿಗೆ ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಮೋದಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!