ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (ಸಂಗ್ರಹ ಚಿತ್ರ) 
ದೇಶ

ಬಿಜೆಪಿ ಕ್ಷಮೆಗೆ ಬಗ್ಗುವುದಿಲ್ಲ: ಕೇಜ್ರಿವಾಲ್

ಡಿಡಿಸಿಎ ಭ್ರಷ್ಟಾಚಾರ ಪ್ರಕರಣ ಕುರಿತಂತೆ ಬಿಜೆಪಿ ಪಕ್ಷ ಇದೀಗ ನನ್ನಲ್ಲಿ ಕ್ಷಮೆಯಾಚಿಸಲು ಪ್ರಯತ್ನ ಮಾಡುತ್ತಿದೆ. ಆದರೆ ಅದಕ್ಕೆ ನಾನು ಬಗ್ಗುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ...

ನವದೆಹಲಿ: ಡಿಡಿಸಿಎ ಭ್ರಷ್ಟಾಚಾರ ಪ್ರಕರಣ ಕುರಿತಂತೆ ಬಿಜೆಪಿ ಪಕ್ಷ ಇದೀಗ ನನ್ನಲ್ಲಿ ಕ್ಷಮೆಯಾಚಿಸಲು ಪ್ರಯತ್ನ ಮಾಡುತ್ತಿದೆ. ಆದರೆ ಅದಕ್ಕೆ ನಾನು ಬಗ್ಗುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.

ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಡಿಡಿಸಿಎ ಅವ್ಯವಹಾರ ಪ್ರಕರಣ ಸಂಬಂಧ ಬಿಜೆಪಿಯವರು ನನ್ನ ಬಳಿ ಕ್ಷಮೆಯಾಚಿಸಲು ಪ್ರಯತ್ನ ನಡೆಸುತ್ತಿದೆ. ಆದರೆ ಇದಕ್ಕೆ ನಾನು ಬಗ್ಗುವುದಿಲ್ಲ. ದೆಹಲಿ ಸರ್ಕಾರ ನಡೆಸಿರುವ ತನಿಖೆಯಲ್ಲಿ ಯಾರಿಗೂ ಕ್ಲೀನ್ ಚೀಟ್ ನೀಡಿಲ್ಲ. ಪ್ರಕರಣ ಸಂಬಂಧ ನಿರ್ದಿಷ್ಟ ವ್ಯಕ್ತಿಗಳನ್ನು ಹೊಣೆ ಮಾಡುವಂತೆ ವರದಿಯಲ್ಲಿ ತಿಳಿಸಲಾಗಿದ್ದು. ಇದರಂತೆ ಜೇಟ್ಲಿಯವರನ್ನು ನಾವು ಹೊಣೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಕೇಂದ್ರ ಹಣಕಾಸು ಸಚಿವರಾಗಿರುವ ಅರುಣ್ ಜೇಟ್ಲಿ ಅವರು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್ ಹಣಕಾಸು ವ್ಯವಹಾರದಲ್ಲಿ ಭ್ರಷ್ಟಾಚಾರ ಎಸಗಿದ್ದಾರೆಂಬ ಆರೋಪಕ್ಕೆ ಕೇಜ್ರಿವಾಲ್ ಅವರು ತನಿಖೆ ಆದೇಶಿಸಿದ್ದರು. ಇದರಂತೆ ತನಿಖೆ ನಡೆಸಿದ ಅಧಿಕಾರಿಗಳು ಜೇಟ್ಲಿ ಅವರಿಗೆ ಕ್ಲೀನ್ ಚಿಟ್ ನೀಡಿತ್ತು. ವರದಿ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ನಾಯಕರು, ವರದಿಯಲ್ಲಿ ಜೇಟ್ಲಿ ಅವರ ಹೆಸರು ಉಲ್ಲೇಖವಾಗದಿರುವ ಕಾರಣ ಕೇಜ್ರಿವಾಲ್ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದರು.

ಈ ಆಗ್ರಹಕ್ಕೆ ಕೇಜ್ರಿವಾಲ್ ಇಂದು ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಡಿಡಿಸಿಎ ಪ್ರಕರಣ ಸಂಬಂಧ ಬಿಜೆಪಿಯವರು ಜೇಟ್ಲಿಗಾಗಿ ನನ್ನ ಬಳಿ ಕ್ಷಮೆ ಬೇಡುತ್ತಿದ್ದಾರೆ. ಆದರೆ ಇದಕ್ಕೆ ನಾನು ಬಗ್ಗುವುದಿಲ್ಲ. ಮಾನನಷ್ಟ ಮೊಕದ್ದಮೆಯಲ್ಲಿ ಜೇಟ್ಲಿ ಅವರು ಪಾರ್ಟಿ ಸವಾಲಿಗೆ ಗುರಿಯಾಗಲಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ