ಪ್ರವೀಣ್ ತೊಗಾಡಿಯಾಗೆ ಮಂಗಳೂರು ಪ್ರವೇಶ ನಿರ್ಬಂಧ
ಮಂಗಳೂರಿನಲ್ಲಿ ಕೋಮುಗಲಭೆಯ ಆತಂಕದ ಛಾಯೆ ಆವರಿಸಿರುವ ಕಾರಣ ಹಿಂದೂ ಪರಿಷತ್ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಮತ್ತು ಇಸ್ಲಾಮಿಕ್ ನಾಯಕ ಡಾ. ಜಕೀರ್ ನಾಯ್ಕ್...
ಮಂಗಳೂರು: ಮಂಗಳೂರಿನಲ್ಲಿ ಕೋಮುಗಲಭೆಯ ಆತಂಕದ ಛಾಯೆ ಆವರಿಸಿರುವ ಕಾರಣ ಹಿಂದೂ ಪರಿಷತ್ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಮತ್ತು ಇಸ್ಲಾಮಿಕ್ ನಾಯಕ ಡಾ. ಜಕೀರ್ ನಾಯ್ಕ್ ಅವರಿಗೆ ಮಂಗಳೂರು ಪ್ರವೇಶ ನಿರ್ಬಂಧಿಸಲಾಗಿದೆ.
ಮುಂಬೈ ಮೂಲದ ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ಸಂಸ್ಥಾಪಕ ಡಾ. ನಾಯ್ಕ್, ಜನವರಿ 3 ರಂದು ಮಂಗಳೂರಿಗೆ ಆಗಮಿಸಲಿದ್ದು ಮೂರು ದಿನಗಳ ಕಾಲ ದಕ್ಷಿಣ ಕರ್ನಾಟಕ ಸಲಾಫಿ ಮೂವ್‌ಮೆಂಟ್‌ನ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಅದೇ ವೇಳೆ ಗೋಹತ್ಯೆ, ಲವ್ ಜಿಹಾದ್ ಮತ್ತು ಹಿಂದೂ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮೊದಲಾದ ವಿಷಯಗಳ ಬಗ್ಗೆ ಚರ್ಚೆ ನಡೆಸುವುದಕ್ಕೆ ತೊಗಾಡಿಯಾ ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸದ್ಯ, ಮಂಗಳೂರಿನಲ್ಲಿ ಆತಂಕದ ಪರಿಸ್ಥಿತಿ ಇರುವ ಕಾರಣ ಇವರಿಬ್ಬರಿಗೂ ಮಂಗಳೂರಿಗೆ ಪ್ರವೇಶ ನಿಷೇಧಿಸಲಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.