ವಿಶ್ವ ಹಿಂದೂ ಪರಿಷತ್ ನಾಯಕ ಪ್ರವೀಣ್ ತೊಗಾಡಿಯಾ (ಸಂಗ್ರಹ ಚಿತ್ರ) 
ದೇಶ

ಇಸಿಸ್ ಸೋಲಿಸಲು ರಾಮ ಮಂದಿರ ನಿರ್ಮಾಣವಾಗಬೇಕು: ಪ್ರವೀಣ್ ತೊಗಾಡಿಯಾ

ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಇರಾನ್ (ಇಸಿಸ್) ಉಗ್ರ ಸಂಘಟನೆಯನ್ನು ಸೋಲಿಸಬೇಕಾದರೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕೆಂದು ವಿಶ್ವ ಹಿಂದೂ ಪರಿಷತ್ ನಾಯಕ ಪ್ರವೀಣ್ ತೊಗಾಡಿಯಾ ಅವರು ಸೋಮವಾರ ಹೇಳಿದ್ದಾರೆ...

ಜಬಲ್ಪುರ: ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಇರಾನ್ (ಇಸಿಸ್) ಉಗ್ರ ಸಂಘಟನೆಯನ್ನು ಸೋಲಿಸಬೇಕಾದರೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕೆಂದು ವಿಶ್ವ ಹಿಂದೂ ಪರಿಷತ್ ನಾಯಕ ಪ್ರವೀಣ್ ತೊಗಾಡಿಯಾ ಅವರು ಸೋಮವಾರ ಹೇಳಿದ್ದಾರೆ.

ಈ ಕುರಿತಂತೆ ಮಧ್ಯಪ್ರದೇಶದ ಜಬಲ್ ಪುರದಲ್ಲಿ ನಡೆದ ವಿಹೆಚ್ ಪಿಯ ರಾಷ್ಟ್ರೀಯ ಕಾರ್ಯಾಕಾರಿ ಸಭೆಯಲ್ಲಿ ಮಾತನಾಡಿರುವ ಅವರು, ಭಾರತದಲ್ಲಿ ತನ್ನ ಅಸ್ತಿತ್ವವನ್ನು ಕಂಡುಕೊಳ್ಳಲು ಯತ್ನಿಸುತ್ತಿರುವ ಇಸಿಸ್ ಉಗ್ರ ಸಂಭಟನೆಯನ್ನು ಸೋಲಿಸಬೇಕಾದರೆ ರಾಮ ದೇಗುಲ ನಿರ್ಮಾಣವಾಗಬೇಕಿದೆ ಎಂದು ಹೇಳಿದ್ದಾರೆ.

ರಾಮ ದೇಗುಲ ನಿರ್ಮಾಣದಿಂದ ನಾನು ಇಸಿಸ್ ಉಗ್ರರನ್ನು ಸೋಲಿಸಬಹುದು ಹಾಗೂ ಭಾರತ ಮತ್ತೊಂದು ಸಿರಿಯಾ ಆಗುವುದಿಂದ ತಡೆಯಬಹುದು. ಅಲ್ಲದೆ ಇದರಿಂದ ಆರ್ಥಿಕ ಪ್ರಗತಿಯೂ ಆಗುತ್ತದೆ. ಇತ್ತೀಚಿನ ದಿನಗಳಲ್ಲಿ ಹಿಂದೂಗಳ ತಿರಸ್ಕಾರ ಹೆಚ್ಚಾಗುತ್ತಿದೆ. ಹಿಂದೂಗಳ ಮಾತುಗಳನ್ನು ಯಾರೂ ಕೇಳುತ್ತಿಲ್ಲ. ರಾಮಮಂದಿರ ನಿರ್ಮಾಣ ಕುರಿತಂತೆ ಸಂಸತ್ತಿನಲ್ಲಿ ಕಾನೂನು ಜಾರಿಗೊಳಿಸಬೇಕು ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ