ಪೀಟರ್ ಮುಖರ್ಜಿ 
ದೇಶ

ಶೀನಾ ಹತ್ಯೆ ಪ್ರಕರಣ: ಪೀಟರ್ ಮುಖರ್ಜಿ ನ್ಯಾಯಾಂಗ ಬಂಧನ ವಿಸ್ತರಣೆ

ಶೀನಾ ಬೋರಾ ಹತ್ಯೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಟಿವಿ ವಾಹಿನಿಯ ಮಾಜಿ ಮುಖ್ಯಸ್ಥ ಪೀಟರ್ ಮುಖರ್ಜಿ...

ಮುಂಬೈ: ಶೀನಾ ಬೋರಾ ಹತ್ಯೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಟಿವಿ ವಾಹಿನಿಯ ಮಾಜಿ ಮುಖ್ಯಸ್ಥ ಪೀಟರ್ ಮುಖರ್ಜಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಜನವರಿ 11ರವರೆಗೆ ವಿಸ್ತರಿಸಲಾಗಿದೆ.
ಪೀಟರ್ ಮುಖರ್ಜಿಯ 14 ದಿನಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಆರೋಪಿಯ ಪರ ವಕೀಲ ಕುಶಾಲ್ ಮೊರ್ ಅವರು ಇಂದು ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ವಿಚಾರಣೆಗೆ ಹಾಜರಾದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ವಿ. ಅದೊನೆ ಅವರು, ಮುಖರ್ಜಿ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ಮುಂದೂಡಿದರು.
ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ಪೀಟ್ ಮುಖರ್ಜಿಯನ್ನು ಕೋರ್ಟ್‌ಗೆ ಕರೆತರಲು ಸಾಧ್ಯವಾಗಲಿಲ್ಲ ಎಂದು ಸಿಬಿಐ ಪರ ವಕೀಲೆ ಕವಿತಾ ಪಾಟೀಲ್ ಅವರು ಕೋರ್ಟ್ ತಿಳಿಸಿದರು. ಅಲ್ಲದೆ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಆರೋಪಿಯ ನ್ಯಾಯಂಗ ಬಂಧನ ಅವಧಿಯನ್ನು ವಿಸ್ತರಿಸುವಂತೆ ಕೋರ್ಟ್‌ಗೆ ಮನವಿ ಮಾಡಿದರು.
ಶೀನಾ ಬೋರಾ ಕೊಲೆ ಪ್ರಕರಣ ಸಂಬಂಧ 59 ವರ್ಷದ ಪೀಟರ್ ಮುಖರ್ಜಿಯನ್ನು ನವೆಂಬರ್ 19ರಂದು ಬಂಧಿಸಲಾಗಿತ್ತು. ಬಳಿಕ ಎರಡು ವಾರಗಳ ಕಾಲ ಆರೋಪಿಯನ್ನು ಸಿಬಿಐ ವಶಕ್ಕೆ ನೀಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!