ಅಜಿತ್ ದೋವಲ್ 
ದೇಶ

ಬ್ರಿಟಿಷರು ಭಾರತ ಬಿಟ್ಟು ತೊಲಗಲು ಸುಭಾಶ್ ಚಂದ್ರ ಬೋಸ್‌ರ ಐಎನ್‌ಎ ಕಾರಣ

ಸುಭಾಶ್ ಚಂದ್ರ ಬೋಸ್ ಅವರು ಇಂಡಿಯನ್ ನ್ಯಾಷನಲ್ ಆರ್ಮಿ ಮೂಲಕ ಸೃಷ್ಟಿಸಿದ ಕಿಡಿಯೇ ಬ್ರಿಟಿಷರು ಭಾರತ ಬಿಟ್ಟು ತೊಲಗಲು ಕಾರಣವಾಯಿತು...

ನವದೆಹಲಿ: 1947ರಲ್ಲಿ ಬ್ರಿಟೀಷರು ಭಾರತವನ್ನು ಬಿಟ್ಟು ತೊಲಗಲು ಕಾರಣ ಏನು ಎಂದರೆ ದೇಶದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟ ಎಂಬ ಉತ್ತರ ಸಿಗುತ್ತದೆ. ಆದರೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಈ ಪ್ರಶ್ನೆಗೆ ಕೊಟ್ಟ ಉತ್ತರವೇನು ಗೊತ್ತಾ? ಸುಭಾಶ್ ಚಂದ್ರ ಬೋಸ್! 
ನೇತಾಜಿ ಸುಭಾಶ್ ಚಂದ್ರ ಬೋಸ್ ಅವರು ಇಂಡಿಯನ್ ನ್ಯಾಷನಲ್ ಆರ್ಮಿ ಮೂಲಕ ಸೃಷ್ಟಿಸಿದ ಕಿಡಿಯೇ ಬ್ರಿಟಿಷರು ಭಾರತ ಬಿಟ್ಟು ತೊಲಗಲು ಕಾರಣವಾಯಿತು ಎಂದು ದೋವಲ್ ಹೇಳಿದ್ದಾರೆ. 
ಯೂಟ್ಯೂಬ್‌ನಲ್ಲಿ ಪೋಸ್ಟ್ ಮಾಡಲ್ಪಟ್ಟ ವಿಡಿಯೋ ಒಂದರಲ್ಲಿ ದೋವಲ್,  1945ರಲ್ಲಿ ಎರಡನೇ ಮಹಾಯುದ್ಧವನ್ನು ಗೆದ್ದ ಬ್ರಿಟಿಷರು ಅಷ್ಟು ಬೇಗನೆ ಭಾರತ ಬಿಟ್ಟು ಹೋಗಲು ತೀರ್ಮಾನಿಸಿದ್ದು ಯಾಕೆ? ಎಂಬುದನ್ನು ವಿವರಿಸಿದ್ದಾರೆ. ಬೋಸ್ ತಮ್ಮ ಇಂಡಿಯನ್ ನ್ಯಾಷನಲ್ ಆರ್ಮಿಯ ಸೈನಿಕರ ಮನಸ್ಸಲ್ಲಿ ಹಚ್ಚಿದ್ದ ಸ್ವಾತಂತ್ರ್ಯದ ಕಿಚ್ಚು ಅಂಥದ್ದಾಗಿತ್ತು ಎಂದು ದೋವಲ್ ಇಲ್ಲಿ ಹೇಳಿದ್ದಾರೆ.
ಆಗಸ್ಟ್ 18, 1945ರಲ್ಲಿ ಜಪಾನ್‌ಗೆ ಪ್ರಯಾಣ ಬೆಳೆಸುತ್ತಿದ್ದ ವೇಳೆ ಸುಭಾಷ್ ಚಂದ್ರ ಬೋಸ್ ಫೋರ್‌ಮೋಸಾ (ಈಗಿನ ತೈವಾನ್)ನಲ್ಲಿ ನಡೆದ ವಿಮಾನ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ ಎಂದು  1945 ಆಗಸ್ಟ್ 22 ರಂದು ಟೋಕಿಯೋ ರೇಡಿಯೋ ಸುದ್ದಿ ಪ್ರಸಾರ ಮಾಡಿತ್ತು.
ಆದರೆ ವಿಮಾನ ಅಪಘಾತದಲ್ಲಿ ಬೋಸ್ ಸತ್ತಿಲ್ಲ ಎಂದು ಅವರ ಅನುಯಾಯಿಗಳು ಹೇಳಿದ್ದು, ಬೋಸ್ 1945ರ ನಂತರ ಬದುಕಿದ್ದರು ಎಂಬ ಬಗ್ಗೆ ಹಲವಾರು ಕತೆಗಳು ಹುಟ್ಟಿಕೊಂಡಿದ್ದವು . 
ಏತನ್ಮಧ್ಯೆ, ಬೋಸ್ ಕುಟುಂಬದವರ ಬಹುಕಾಲದ ಬೇಡಿಕೆಗೆ ಮಣಿದು, ಪ್ರಧಾನಿ ನರೇಂದ್ರ ಮೋದಿಯರ ಸರ್ಕಾರ ನೇತಾಜಿಗೆ ಸಂಬಂಧಿಸಿದ ರಹಸ್ಯ ಕಡತಗಳನ್ನು ಬಹಿರಂಗ ಪಡಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT