ಹೌರಾ -ಅಮೃತ್‌ಸರ ಎಕ್ಸ್‌ಪ್ರೆಸ್‌ನಲ್ಲಿ ಸೈನಿಕರಿಂದ ಬಾಲಕಿ ಮೇಲೆ ಗ್ಯಾಂಗ್‌ರೇಪ್
ಸೋಮವಾರ ರೈಲು ಪ್ರಯಾಣದ ವೇಳೆ ಮೂವರು ಸೈನಿಕರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು 14ರ ಹರೆಯದ ಬಾಲಕಿಯೊಬ್ಬಳು...
ರಾಂಚಿ: ಸೋಮವಾರ ರೈಲು ಪ್ರಯಾಣದ ವೇಳೆ ಮೂವರು ಸೈನಿಕರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು 14ರ ಹರೆಯದ ಬಾಲಕಿಯೊಬ್ಬಳು ದೂರಿದ್ದಾಳೆ.
ಆಕೆಯ ದೂರಿನ ಮೇರೆಗೆ ಓರ್ವ ಸೈನಿಕನನ್ನು ಬಂಧಿಸಿದ್ದು, ಇನ್ನಿತರರಿಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಲುಧಿಯಾನದಲ್ಲಿರುವ ಫ್ರೆಂಡ್ ಒಬ್ಬರನ್ನು ಭೇಟಿ ಮಾಡುವ ಸಲುವಾಗಿ ಬಾಲಕಿ ಹೌರಾ-ಅಮೃತಸರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣ ಬೆಳೆಸಿದ್ದಳು. ಆ ವೇಳೆ ಸೈನಿಕರು ಆಕೆಗೆ ಮದ್ಯ ಕುಡಿಸಿ ಆಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಹೇಳಲಾಗಿದೆ.
ಇದಾದ ನಂತರ ಈಕೆ ಜಾರ್ಖಂಡ್‌ನ ದಿಯೋಗರ್ ಜಿಲ್ಲೆಯ ಮಧುಪುರ್ ಸ್ಟೇಷನ್‌ನಲ್ಲಿ ಇಳಿದು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಓರ್ವ ಸೈನಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಆದಾಗ್ಯೂ, ಈ ಬಗ್ಗೆ ಸೇನೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಇತ್ತ, ದೂರು ನೀಡಿದ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.