ಅರವಿಂದ್ ಕೇಜ್ರಿವಾಲ್ 
ದೇಶ

ದೆಹಲಿ ಸರ್ಕಾರದ ಅಧಿಕಾರಿಗಳ ಅಮಾನತು ಆದೇಶ ರದ್ದುಗೊಳಿಸಿದ ಕೇಂದ್ರ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಕೇಂದ್ರ ಸರ್ಕಾರದ ನಡುವಿನ ಹಗ್ಗಜಗ್ಗಾಟ ಮುಂದುವರಿದಿದ್ದು, ಇಬ್ಬರು ಅಧಿಕಾರಿಗಳನ್ನು...

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಕೇಂದ್ರ ಸರ್ಕಾರದ ನಡುವಿನ ಹಗ್ಗಜಗ್ಗಾಟ ಮುಂದುವರಿದಿದ್ದು, ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ್ದ ದೆಹಲಿ ಸರ್ಕಾರದ ಆದೇಶವನ್ನು ಗುರುವಾರ ಕೇಂದ್ರ ಸರ್ಕಾರ ರದ್ದುಪಡಿಸಿದೆ.
ಪಬ್ಲಿಕ್ ಪ್ರಾಸಿಕ್ಯೂಟರ್ ಗಳ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ನಿರ್ಣಯಕ್ಕೆ ಸಹಿ ಹಾಕಿಲ್ಲ ಎಂಬ ಕಾರಣಕ್ಕೆ ದೆಹಲಿ ಸರ್ಕಾರ ಇಬ್ಬರು ಗೃಹ ಇಲಾಖೆಯ ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಆದರೆ ಈ ಅಮಾನತು ಆದೇಶವನ್ನು ಕೇಂದ್ರ ಗೃಹ ಸಚಿವಾಲಯ ಇಂದು ರದ್ದುಗೊಳಿಸಿದೆ. 
ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿರುವ ದೆಹಲಿ ಸರ್ಕಾರ ಕ್ರಮ ಸರಿಯಲ್ಲ. ಇದು ಕಾನೂನು ಬಾಹಿರ ನಡೆ ಎಂದು ಕೇಂದ್ರ ಗೃಹಸಚಿವಾಲಯ ದೆಹಲಿ ಸರ್ಕಾರಕ್ಕೆ ಪತ್ರ ಬರೆದಿದೆ. ಅಲ್ಲದೇ ಇಬ್ಬರು ಅಧಿಕಾರಿಗಳ ಅಮಾನತು ಆದೇಶವನ್ನು ರದ್ದು ಮಾಡಿದೆ. ಈ ಮೂಲಕ ಮತ್ತೆ ಕೇಜ್ರಿವಾಲ್ ಮತ್ತು ಕೇಂದ್ರ ಸರ್ಕಾರದ ನಡುವೆ ಜಂಗಿಕುಸ್ತಿ ಮುಂದುವರಿದಂತಾಗಿದೆ.
ಈ ಮಧ್ಯೆ ದೆಹಲಿ ಸರ್ಕಾರದ ಕ್ರಮವನ್ನು ಖಂಡಿಸಿ 70 ಐಎಎಸ್ ಅಧಿಕಾರಿಗಳು ಅರ್ಧ ದಿನ ರಜೆ ಹಾಕಿ, ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!