ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ(ಸಂಗ್ರಹ ಚಿತ್ರ) 
ದೇಶ

ಅಧಿಕಾರಿಗಳ ಅಮಾನತು ರದ್ದು; ಕೇಂದ್ರ ಮತ್ತು ದೆಹಲಿ ಸರ್ಕಾರಗಳ ನಡುವಿನ ಪ್ರತಿಷ್ಠೆಯ ಜಗಳ: ಕಾಂಗ್ರೆಸ್

ದೆಹಲಿ ಗೃಹ ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳನ್ನು ಅಮಾನತ್ತು ಮಾಡಿರುವ ಕ್ರಮವನ್ನು ಟೀಕಿಸಿರುವ...

ನವದೆಹಲಿ: ದೆಹಲಿ ಗೃಹ ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳನ್ನು ಅಮಾನತ್ತು ಮಾಡಿರುವ ಕ್ರಮವನ್ನು ಟೀಕಿಸಿರುವ ಕಾಂಗ್ರೆಸ್ ಪಕ್ಷ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಪ್ರತಿಷ್ಠೆಯಿಂದಾಗಿ ಈ ಪರಿಸ್ಥಿತಿಯುಂಟಾಗಿದ್ದು, ಇವರ ಮಧ್ಯೆ ದೆಹಲಿಯ ಜನತೆ ಸಿಲುಕಿ ಬಳಲುತ್ತಿದ್ದಾರೆ ಎಂದು ಆರೋಪಿಸಿದೆ.

ಇದು ಕೇಂದ್ರ ಮತ್ತು ದೆಹಲಿ ಸರ್ಕಾರಗಳ ನಡುವಿನ ಜಗಳ. ಗಂಡ-ಹೆಂಡಿರ ಜಗಳದ ಮಧ್ಯೆ ಕೂಸು ಬಡವಾದಂತೆ ದೆಹಲಿ ಜನತೆ ಬಳಲುತ್ತಿದ್ದಾರೆ. ಎರಡೂ ಸರ್ಕಾರಗಳು ಬೇರೆ ಬೇರೆ ತೀರ್ಮಾನ ತೆಗೆದುಕೊಂಡಿದ್ದರಿಂದಾಗಿ ಸಂಘರ್ಷವುಂಟಾಗಿದೆ. ಈ ಹಿಂದೆ ಯಾವುದಾದರೂ ಕಡತಗಳು ಗವರ್ನರ್ ಬಳಿಗೆ ಹೋಗಬೇಕೆ, ಬೇಡವೇ ಎಂಬ ಬಗ್ಗೆ ಗೊಂದಲಗಳಿದ್ದವು. ಈಗ ರಾಜ್ಯಪಾಲರು ಸಂಪುಟ ತೆಗೆದುಕೊಂಡ ನಿರ್ಧಾರಗಳಿಗೆ ಸಹಿ ಹಾಕುವುದಿಲ್ಲ ಎಂದು ಹೇಳುತ್ತಿದ್ದಾರೆ. ಹಾಗಾಗಿ ಇಲ್ಲೇನೋ ಪಿತೂರಿ ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕ ಜೆ.ಪಿ. ಅಗರ್ ವಾಲ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಆಡಳಿತ ಮಾಡುವುದೆಂದರೆ ಸರ್ವಾಧಿಕಾರ ಅಲ್ಲ. ಪರಸ್ಪರ ಮಾತುಕತೆ ಮತ್ತು ಚರ್ಚೆಯ ಮೂಲಕ ತೀರ್ಮಾನಗಳನ್ನು ತೆಗೆದುಕೊಳ್ಳಬೇಕು. ದೆಹಲಿ ಸರ್ಕಾರ ಮಾತುಕತೆ ನಡೆಸುವುದರಿಂದ ತಪ್ಪಿಸಿಕೊಳ್ಳುತ್ತದೆ. ಅಧಿಕಾರಿಗಳು ಸರ್ಕಾರದ ಜೊತೆ ಕೆಲಸ ಮಾಡುತ್ತಾರೆ. ಇಂತಹ ಸಂದರ್ಭಗಳಲ್ಲಿ ಮಾತುಕತೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಅದು ಬಿಟ್ಚು ಸರ್ವಾಧಿಕಾರ ನಡೆಸುವುದು ಒಳ್ಳೆಯದಲ್ಲ. ಇದು ಅವರವರ ಪ್ರತಿಷ್ಠೆಯಿಂದಾಗಿ ನಡೆಯುವ ಜಗಳವಿದು ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ಮತ್ತೊಬ್ಬ ನಾಯಕ ಟಾಮ್ ವಡಕ್ಕನ್ ಪ್ರತಿಕ್ರಿಯೆ ನೀಡಿ, ಆಡಳಿತ ನಡೆಸಲು ಅಧಿಕಾರಿಗಳು ಬೇಕು. ದೆಹಲಿಯ ಗೃಹ ಸಚಿವರು ತಮಗೆ ಕಾರ್ಯಭಾರ ಮಾಡಲು ಅಧಿಕಾರಿಗಳ ಅವಶ್ಯಕತೆ ಇಲ್ಲ ಎಂದು ಹೇಳುತ್ತಾರೆ, ಇದರಲ್ಲೇ ಅವರಿಗೆ ವ್ಯವಸ್ಥೆಯ ಬಗ್ಗೆ, ಆಡಳಿತದ ಕುರಿತು ಎಷ್ಟು ಅನುಭವವಿದೆ ಎಂದು ಗೊತ್ತಾಗುತ್ತದೆ. ದೆಹಲಿ ಸರ್ಕಾರ ಫತ್ವಾ ಹೊರಡಿಸಿದರೆ ಅದನ್ನು ಯಾವ ಅಧಿಕಾರಿಗಳೂ ಒಪ್ಪಲು ಸಾಧ್ಯವಿಲ್ಲ, ಇನ್ನಷ್ಟು ಸಮಸ್ಯೆ ಸೃಷ್ಟಿಸುತ್ತಾರಷ್ಟೆ ಎಂದರು.

ದೆಹಲಿ ಸರ್ಕಾರದ ಸಚಿವ ಸಂಪುಟ ನಿರ್ಧರಿಸಿದ ಎರಡು ಕಡತಗಳಿಗೆ ಸಹಿ ಹಾಕಲು ಗೃಹ ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳು ನಿರಾಕರಿಸಿದ್ದರಿಂದ ಅವರನ್ನು ಸರ್ಕಾರ ಅಮಾನತ್ತು ಮಾಡಿತ್ತು. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸುಮಾರು 200 ಮಂದಿ ಅಧಿಕಾರಿಗಳು ಸಾಮೂಹಿಕವಾಗಿ ರಜೆ ಮೇಲೆ ಹೋಗಿದ್ದಾರೆ. ಕೇಂದ್ರ ಸರ್ಕಾರ ಅಮಾನತು ಆದೇಶವನ್ನು ರದ್ದುಪಡಿಸಿದೆ.

ಈ ಮಧ್ಯೆ ದೆಹಲಿ ಸರ್ಕಾರದ ಕ್ರಮ, ಆಡಳಿತ ನೀತಿ ವಿರೋಧಿಸಿ ಬಿಜೆಪಿ ಪ್ರತಿಭಟನೆಯ ಬೆದರಿಕೆಯೊಡ್ಡಿದೆ. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಕೇಜ್ರಿವಾಲ್ ರಾಜೀನಾಮೆ ನೀಡಬೇಕೆಂದು ಬಿಜೆಪಿ ಶಾಸಕ ವಿಜೇಂದರ್ ಗುಪ್ತ ತಿಳಿಸಿದ್ದಾರೆ.

ಸರ್ಕಾರಿ ಅಧಿಕಾರಿಗಳು ಸಾಮೂಹಿಕ ರಜೆ ಮೇಲೆ ಹೋಗುತ್ತಿರುವುದು ಗಂಭೀರ ವಿಷಯ. ಕೇಜ್ರಿವಾಲ್ ಸರ್ಕಾರ ಅವ್ಯವಸ್ಥೆಯ ಆಗರವಾಗಿದೆ. ಆಪ್ ಪಕ್ಷಕ್ಕೆ ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ನೈತಿಕ ಹಕ್ಕು ಇಲ್ಲ. ಇಂತಹ ಸಮಸ್ಯೆ, ಜಗಳಗಳು ಆಗಾಗ ಏಕೆ ಹುಟ್ಟಿಕೊಳ್ಳುತ್ತವೆ ಎಂದು ಮುಖ್ಯಮಂತ್ರಿ ಉತ್ತರಿಸಬೇಕು ಎಂದು ಗುಪ್ತ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!